ಮುಂಬೈ:ತಮ್ಮ ಹೊಲದಲ್ಲಿ ಸಾಕಲಾಗಿದ್ದ ಮೇಕೆ ಹಾಗೂ ಪಾರಿವಾಳಗಳನ್ನು ಕದ್ದಿದ್ದಾರೆ ಎಂಬ ಶಂಕೆಯ ಮೇರೆಗೆ ಯುವಕರ ಗುಂಪೊಂದು ದಲಿತ ಸಮುದಾಯಕ್ಕೆ ಸೇರಿದ ನಾಲ್ವರು ಬಾಲಕರನ್ನು ಅಮಾನುಷವಾಗಿ ಥಳಿಸಿರುವ ಘಟನೆ ಮಹಾರಾಷ್ಟ್ರದ ಅಹ್ಮದ್​ನಗರ ಜಿಲ್ಲೆಯ ಶ್ರೀರಾಮ್​ಪುರ ತಾಲ್ಲೂಕಿನಲ್ಲಿ ನಡೆದಿದೆ.
ಘಟನೆಯು ಶ್ರೀರಾಮ್​ಪುರ ತಾಲ್ಲೂಕಿನ ಹರೇಗಾಂವ್​ ಎಂಬ ಗ್ರಾಮದಲ್ಲಿ ನಡೆದಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಡಾ.ಬಿ.ಆರ್​. ಅಂಬೇಡ್ಕರ್​ ಅವರ ಮೊಮ್ಮಗ ಪ್ರಕಾಶ್​ ಅಂಬೇಡ್ಕರ್​ ಕಳ್ಳತನ ಶಂಕೆ ಮೇಲೆ ನಾಲ್ವರು ಬಾಲಕರನ್ನು ಅಮಾನುಷವಾಗಿ ಥಳಿಸಿ ಅವರ ಮೇಲೆ ಮೂತ್ರ ವಿಸರ್ಜನೆ ಮಾಡಲಾಗಿದೆ. ಹಲ್ಲೆ ನಡೆಸಿದ ದುರುಳರು ತಮ್ಮ ಎಂಜಲನ್ನು ಸಹ ನೆಕ್ಕುವಂತೆ ಮಾಡಿದ್ದಾರೆ. ಈ ರೀತಿ ಅಮಾನವೀಯ ಕೃತ್ಯಗಳನ್ನು ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ.
A heart-wrenching incident happened in Maharashtra's Ahmednagar, Suspected of stealing goats and pigeons, Dalit youths were stripped and mercilessly beaten by hanging upside down on a tree.pic.twitter.com/p8rGxGbgVp
ಈ ಜಾತಿ ತಾರತಮ್ಯ, ಬಹಿಷ್ಕಾರ, ನಿಂದನೆ, ಅವಮಾನ, ಹಿಂಸಾಚಾರ ಮತ್ತು ಕ್ರೌರ್ಯ ಹೊಸದೇನೂ ಅಲ್ಲ, ಸರಕಾರದ ಉದಾಸೀನತೆಯೂ ಅಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಮಧ್ಯಪ್ರದೇಶವನ್ನು ಬಿಜೆಪಿ ದಲಿತರ ಮೇಲಿನ ದೌರ್ಜನ್ಯದ ಪ್ರಯೋಗಾಲಯವನ್ನಾಗಿ ಮಾಡಿದೆ: ಮಲ್ಲಿಕಾರ್ಜುನ ಖರ್ಗೆ
ವಿಚಾರ ಬೇಳಕಿಗೆ ಬರುತ್ತಿದ್ದಂತೆ ಬಾಲಕರು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್​ ಸಂತ್ರಸ್ತರ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತಂತೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ರೀತಿಯ ಹೇಯ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸುವ ಮಾತಿಲ್ಲ ಎಂದು ಹೇಳಿದ್ದಾರೆ.
I just spoke to the one of the victims and his grandmother over a phone call.He was thrashed, urinated upon, spitted on, forced to lick his own spit, stripped and hung upside down.Horrific, isn’t?This is what MY PEOPLE face everyday.Neither this caste discrimination,…pic.twitter.com/ekkhM5iE4y
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − two =
Remember me
