ಜಮ್ಮು-ಕಾಶ್ಮೀರ:ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸೋಮವಾರ (ಜು.15) ರಾತ್ರಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ ಯೋಧರು ಇಂದು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.
ಇದನ್ನೂ ಓದಿ:ಟ್ರಂಪ್ ಶೂಟರ್ ಕ್ರುಕ್ಸ್ ರೈಫಲ್ ಟೀಮ್ಂದ ತಿರಸ್ಕೃತಗೊಂಡಿದ್ದ!
ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ ಪಡೆಗಳು ರಾತ್ರಿ 7.45ರ ಸುಮಾರಿಗೆ ದೇಸಾ ಅರಣ್ಯ ಪ್ರದೇಶದ ಧರಿ ಗೋಟೆ ಉರರಬಾಗಿಯಲ್ಲಿ ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಬೆನ್ನಲ್ಲೇ ಈ ಎನ್‌ಕೌಂಟರ್ ಎದುರಾಯಿತು. ಭಾರತೀಯ ಸೇನೆಯ ಕಣ್ತಪ್ಪಿಸಿ ಹೋಗುತ್ತಿದ್ದ ಉಗ್ರರನ್ನು ಯೋಧರು ಪತ್ತೆಹಚ್ಚುತ್ತಿದ್ದಂತೆ ಗುಂಡಿನ ದಾಳಿ ನಡೆದಿದೆ. ಆರಂಭದಲ್ಲಿ 20 ನಿಮಿಷಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಅಧಿಕಾರಿ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು.
ಒಟ್ಟು ಐವರು ಯೋಧರು ಉಗ್ರರೊಂದಿಗೆ ಹೋರಾಡುವಾಗ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಆರಂಭದಲ್ಲಿ ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಮತ್ತು ಅವರ ಸ್ಥಿತಿ ಚಿಂತಾಜನಕವಾಗಿತ್ತು ಎಂದು ಭಾರತೀಯ ಸೇನೆ ತಿಳಿಸಿದೆ,(ಏಜೆನ್ಸೀಸ್).
ಹರ್ಭಜನ್​​, ರೈನಾ ಸಂಭ್ರಮದಿಂದ ಮತ್ತೊಬ್ಬರಿಗೆ ನೋವು! ಮಾಜಿ ಕ್ರಿಕೆಟಿಗರ ವರ್ತನೆ ಖಂಡಿಸಿದ ಮಾನ್ಸಿ ಜೋಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
