ಮುಂಬೈ:ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿರುವ ಬೆಂಗಳೂರು-ಮುಂಬೈ ಹೆದ್ದಾರಿಯ ನಾವಲೆ ಸೇತುವೆ ಬಳಿ ನಡೆದಿದೆ.
ಡಿಕ್ಇ ಹೊಡೆದ ರಭಸಕ್ಕೆ ಎರಡು ಲಾರಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಓರ್ವ ಗಾಯಾಳು ಮೃತಪಟ್ಟಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
#WATCH| Maharashtra: Four people died after a truck was gutted in a fire on the Pune-Bangalore highway near Swaminarayan Temple in Pune city. Further details awaited. (16.10)pic.twitter.com/9iD4gokiLH
ಇದನ್ನೂ ಓದಿ:ಯುದ್ಧಪೀಡಿತ ಇಸ್ರೇಲ್​ಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಭೇಟಿ
ಈ ಕುರಿತು ಪ್ರತಿಕ್ರಿಯಿಸಿರುವ ಸಿನ್ಹಗಢ್​ ರಸ್ತೆಯ ಪೊಲೀಸ್​ ಠಾಣಾಧಿಕಾರಿ ಅಭಯ್​ ಮಹಾಜನ್, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಲಾರಿ ಹಾಗೂ ಕಂಟೈನರ್​ ನಡುವೆ ಅಪಘಾತ ಸಂಭವಿಸಿದೆ. ಕಂಟೈನರ್​ ಟ್ರಕ್​ನ ಬ್ರೇಕ್​ ವೈಫಲ್ಯಗೊಂಡ ಪರಿಣಾಮ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಎರಡು ಲಾರಿಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ವಿಚಾರ ತಿಳಿದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಎರಡು ಟ್ರಕ್​ನಲ್ಲಿದ್ದ ಆರು ಮಂದಿ ಪೈಕಿ ನಾಲ್ವರು ಮತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಸಿನ್ಹಗಢ್​ ರಸ್ತೆಯ ಪೊಲೀಸ್​ ಠಾಣಾಧಿಕಾರಿ ಅಭಯ್​ ಮಹಾಜನ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
