ಗ್ರೇಟರ್ ನೋಯ್ಡಾ:ಗ್ರೇಟರ್ ನೋಯ್ಡಾದ ಡ್ರೀಮ್ ವ್ಯಾಲಿ ಪ್ರಾಜೆಕ್ಟ್ ನಿರ್ಮಾಣ ಸ್ಥಳದಲ್ಲಿ ದೊಡ್ಡ ಅಪಘಾತ ಸಂಭವಿಸಿದೆ. ಈ ನಿರ್ಮಾಣ ಸ್ಥಳದಲ್ಲಿ ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಬಂದ ತಕ್ಷಣ ನೋಯ್ಡಾ ಸಿಇಒ ಎನ್‌ಜಿ ರವಿ ಮತ್ತು ಜಿಲ್ಲಾಧಿಕಾರಿ ಮನೀಶ್ ಕುಮಾರ್ ವರ್ಮಾ ಅವರು ಕಾರ್ಮಿಕರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಜಿಲ್ಲಾ ಆಸ್ಪತ್ರೆಗೆ ತೆರಳಿದರು. ಅಧಿಕಾರಿಗಳು ಕೂಡ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ.
ಈ ಯೋಜನೆಯಲ್ಲಿ ಬಿಲ್ಡರ್ 26 ಅಂತಸ್ತಿನ ಕಟ್ಟಡವನ್ನು ನಿರ್ಮಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಅಪಘಾತದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಬಿಗಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಗ್ರೇಟರ್ ನೋಯ್ಡಾದ ಆಮ್ರಪಾಲಿ ಬಿಲ್ಡರ್ಸ್‌ನ ನಿರ್ಮಾಣ ಹಂತದಲ್ಲಿದ್ದ ಲಿಫ್ಟ್ ಕುಸಿತದ ಕುರಿತು ಡಿಎಂ ಮನೀಶ್ ವರ್ಮಾ ಅವರು, ನಿರ್ಮಾಣ ಹಂತದ ಸ್ಥಳದಲ್ಲಿ ಅಪಘಾತ ಸಂಭವಿಸಿದೆ, ಇದರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಐವರ ಸ್ಥಿತಿಗತಿ ಚಿಂತಾಜನಕ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮ ತಂಡ ಜಿಲ್ಲಾಸ್ಪತ್ರೆಯಲ್ಲಿದೆ. ನಮ್ಮ ಅಧಿಕಾರಿಗಳು ಕೂಡ ಸ್ಥಳದಲ್ಲಿ ಇದ್ದಾರೆ. ಅಲ್ಲಿ ಯಾರೂ ಸಿಲುಕಿಕೊಂಡಿಲ್ಲ. ಗಾಯಗೊಂಡವರಿಗೆಲ್ಲ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
#WATCH| Noida: On the lift collapse on an under-construction site of Amrapali Builders in Greater Noida, DM Manish Verma says,"…Four people have died…Five people are in critical condition and undergoing treatment in a city hospital…Our team is present in the city…pic.twitter.com/PIfZMYjTSC
— ANI UP/Uttarakhand (@ANINewsUP)September 15, 2023

ಅನಂತನಾಗ್‌ನಲ್ಲಿ ಮತ್ತೊಬ್ಬ ಯೋಧ ಹುತಾತ್ಮ; ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ, ಮುಂದುವರಿದ ಎನ್‌ಕೌಂಟರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 2 =
Remember me
