ಪಾಟ್ನಾ:ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರ ಗುಡಿಸಲಿನಲ್ಲಿ ಬೆಂಕಿ ಕಾಣಿಸಿಕೊಂಡು ಸಜೀವ ದಹನವಾಗಿರುವ ಘಟನೆ ಮಂಗಳವಾರ ನಡೆದಿದೆ.
ಪೊಲೀಸರ ಪ್ರಕಾರ, ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮದಯಾಳು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸೋನಿ ಕುಮಾರಿ (12), ಶಿವಾನಿ ಕುಮಾರಿ (8), ಅಮೃತಾ ಕುಮಾರಿ (5) ಮತ್ತು ರೀಟಾ ಕುಮಾರಿ (3) ಮೃತರು. ನರೇಶ್ ರಾಮ್ ಎಂಬಾತನ ಪುತ್ರಿಯರು. ಹುಡುಗಿಯರು ಮಲಗಿದ್ದಾಗ ಅವರ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಒಳಗಿದ್ದರು ಎನ್ನಲಾಗಿದೆ.
Congress Manifesto 2023: ಬಿಜೆಪಿ ಜಾರಿಗೆ ತಂದ ಕಾನೂನುಗಳು ಒಂದು ವರ್ಷದೊಳಗೆ ರದ್ದು , ಭಜರಂಗದಳ ನಿಷೇಧ!
ಈ ದುರ್ಘಟನೆಯಲ್ಲಿ ಏಳು ಮಂದಿಗೆ ಸುಟ್ಟ ಗಾಯಗಳಾಗಿದ್ದು, ಜಿಲ್ಲೆಯ ಶ್ರೀಕೃಷ್ಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!ಸದರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾತನಾಡಿ, “ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಾವನ್ನಪ್ಪಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ. ಗಾಯಗೊಂಡ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
NCP ಮುಖ್ಯಸ್ಥ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eight =
Remember me
