ಮುಂಬೈ:ಆಸ್ಪತ್ರೆಯ ಕಟ್ಟಡದಲ್ಲಿ ನಾಲ್ವರ ಶವ ಪತ್ತೆಯಾಗಿದ್ದು, ಮೃತರಲ್ಲಿ ಮೂವರು ಒಂದೇ ಕುಟುಂಬದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಕಂಡಿವಾಲಿ ನಗರದಲ್ಲಿರುವ ಆಸ್ಪತ್ರೆಯ ಕಟ್ಟಡ ಇದಾಗಿದ್ದು, 15 ವರ್ಷಗಳ ಹಿಂದೆಯೇ ಈ ಆಸ್ಪತ್ರೆಯನ್ನು ಮುಚ್ಚಲಾಗಿತ್ತು. ಇತ್ತೀಚೆಗೆ ಕುಟುಂಬವೊಂದು ಈ ಕಟ್ಟಡದ ಒಂದು ಭಾಗದಲ್ಲಿ ವಾಸಿಸುತ್ತಿತ್ತು ಎಂದು ತಿಳಿಸಿದ್ದಾರೆ.
ಮೃತಪಟ್ಟ ನಾಲ್ವರ ಮೃತದೇಹದ ಬಳಿ, ಡೆತ್​ನೋಟ್​ ಸಿಕ್ಕಿದ್ದು, ಆಸ್ಪತ್ರೆಯ 2ನೇ ಮಹಡಿಯಲ್ಲಿ ರಕ್ತದಿಂದ ಮಡುವಿನಲ್ಲಿರುವ ಇಬ್ಬರು ಹೆಣ್ಣುಮಕ್ಕಳ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಡೆತ್​​ನೋಟ್​ ಪೊಲೀಸರ ವಶದಲ್ಲಿದ್ದು, ಸದ್ಯಕ್ಕೆ ಬಹಿರಂಗಪಡಿಸಿಲ್ಲ.
ಮೃತರನ್ನು ಕಿರಣ್​​ ದಲ್ವಿ, ಆತನ ಇಬ್ಬರು ಹೆಣ್ಣು ಮಕ್ಕಳಾದ ಮುಸ್ಕಾನ್​ ಮತ್ತು ಭೂಮಿ, ಮತ್ತೋರ್ವ ಶಿವದಯಾಲ್​ ಸೆನ್​ ಎಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ತನಿಖೆ ದಾಖಲಿಸಿಕೊಂಡಿದ್ದು, ತನಿಖೆ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − one =
Remember me
