ನವದೆಹಲಿ:ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಭಾವಿಸಲಾಗಿರುವ ಐದು ರಾಜ್ಯಗಳ ಚುನಾವಣಾ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು ಕುತೂಹಲದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್​ಗಢ ಅಸೆಂಬ್ಲಿಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟವಾಗಲಿದ್ದು ಮಿಜೋರಾಂನಲ್ಲಿ ಸೋಮವಾರ ಮತ ಎಣಿಕೆ ನಡೆಯಲಿದೆ ಎಂದು ಭಾರತ ಚುನಾವಣೆ ಆಯೋಗ ತಿಳಿಸಿದೆ. ನಾಲ್ಕೂ ರಾಜ್ಯಗಳಲ್ಲಿ ಮತ ಎಣಿಕೆಗೆ ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ.
ನ. 30ರಂದು ನಡೆದ ಮತದಾನೋತ್ತರ ಸಮೀಕ್ಷೆಗಳು (ಎಕ್ಸಿಟ್ ಪೋಲ್) ಅಧಿಕಾರದ ಕನಸು ಕಾಣುತ್ತಿರುವ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್​ಗೆ ಸಿಹಿ-ಕಹಿ ಮಿಶ್ರ ಸುದ್ದಿ ನೀಡಿವೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಮೇಲುಗೈ ಪಡೆಯಲಿದೆ ಎಂದು ಹಲವು ಸಮೀಕ್ಷೆಗಳು ಹೇಳಿದರೆ, ಛತ್ತೀಸ್​ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಮುನ್ನಡೆಯ ಭವಿಷ್ಯ ನುಡಿದಿವೆ. ಆಳುವ ಮಿಜೋ ನ್ಯಾಶನಲ್ ಫ್ರಂಟ್ (ಎಂಎನ್​ಎಫ್) ಮಿಜೋರಾಂನಲ್ಲಿ ಮುಂದಿದೆ ಎಂದಿವೆ.
ಜಿದ್ದಾಜಿದ್ದಿಯ ಆಖಾಡ:ತೆಲಂಗಾಣದ ಚುನಾವಣಾ ಆಖಾಡ ತೀರಾ ಜಿದ್ದಾಜಿದ್ದಿನಿಂದ ಕೂಡಿದ್ದು 10 ವರ್ಷದಿಂದ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನೇತೃತ್ವದ ಭಾರತ ರಾಷ್ಟ್ರ ಸಮಿತಿ (ಬಿಆರ್​ಎಸ್) ಪಕ್ಷವನ್ನು ಕಾಂಗ್ರೆಸ್ ಪದಚ್ಯುತಗೊಳಿಸಬಹುದು ಎಂದಿದ್ದವು.
ಆದರೆ, ಇನ್ನೊಂದು ವಿಶ್ಲೇಷಣೆ ಪ್ರಕಾರ ಕಾಂಗ್ರೆಸ್​ಗೆ ಬಿಆರ್​ಎಸ್ ತೀವ್ರ ಪೈಪೋಟಿ ನೀಡುವ ಸಂಭವವಿದೆ. ಆ ಮೂಲಕ ಹ್ಯಾಟ್ರಿಕ್ ಬಾರಿಸುವ ನಿರೀಕ್ಷೆ ಇದೆ ಎಂದು ಅದು ಹೇಳಿದೆ. ಕರ್ನಾಟಕ ವಿಧಾನಸಭೆಯಲ್ಲಿ ಐದು ಗ್ಯಾರಂಟಿಗಳನ್ನು ನೀಡಿ ಮತದಾರರಿಗೆ ಮೋಡಿ ಹಾಕುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ಮಾದರಿ, ತೆಲಂಗಾಣದಲ್ಲೂ ಮ್ಯಾಜಿಕ್ ಮಾಡಬಹುದು ಎಂಬುದು ಕಾಂಗ್ರೆಸ್ ಕನಸಾಗಿದೆ. ಛತ್ತೀಸ್​ಗಢ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ಹೋರಾಟ ಏರ್ಪಟ್ಟಿದೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಮತ್ತು ಜನ್ ಕಿ ಬಾತ್ ಎಕ್ಸಿಟ್ ಪೋಲ್​ಗಳು ಅಭಿಪ್ರಾಯಪಟ್ಟಿವೆ.
ಕಾಂಗ್ರೆಸ್​ಗೆ ಶಾಕ್ ಎಂದ ಬಿಜೆಪಿ:ಈ ನಡುವೆ, ಎಕ್ಸಿಟ್ ಪೋಲ್ ಕಾಂಗ್ರೆಸ್​ಗೆ ಶಾಕ್ ನೀಡಿದೆ ಎಂದು ಛತ್ತೀಸ್​ಗಢ ಬಿಜೆಪಿ ಅಧ್ಯಕ್ಷ ಅರುಣ್ ರಾವ್ ಹೇಳಿದ್ದಾರೆ.
ವಸುಂಧರಾ ಪೂಜೆ:ಫಲಿತಾಂಶಕ್ಕೂ ಮುನ್ನ, ಬಿಜೆಪಿ ನಾಯಕಿ ವಸುಂಧರಾ ರಾಜೇ ಮೋತಿ ದುಂಗ್ರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ಕಮಲ್​ನಾಥ್ ಫ್ಲೆಕ್ಸ್:ಫಲಿತಾಂಶ ಪ್ರಕಟವಾಗುವ ಮುಂಚೆಯೇ ಕಾಂಗ್ರೆಸ್ ಮುಖಂಡ ಕಮಲ್​ನಾಥ್ ಮಧ್ಯಪ್ರದೇಶದ ಮುಖ್ಯಮಂತ್ರಿ ಎಂದು ಬಿಂಬಿಸಿದ ಬ್ಯಾನರ್​ಗಳನ್ನು ರಾಜ್ಯ ಕಾಂಗ್ರೆಸ್ ಕಚೇರಿ ಎದುರು ಹಾಕಲಾಗಿದ್ದು, ಇದೊಂದು ಅತಿರೇಕದ ವರ್ತನೆ ಎಂದು ಸ್ವತಃ ಕಾಂಗ್ರೆಸ್ ಮುಖಂಡರೇ ಟೀಕಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 11 =
Remember me
