ಎಲ್ಲೆಡೆ ವ್ಯಾಪಿಸಿರುವ ಕರೊನಾ ಸಂಕಷ್ಟ, ರಾಜಕೀಯ ಬಿಕ್ಕಟ್ಟಿನ ನಡುವೆಯೂ ಮಹಿಳೆಯರಿಗಾಗಿ ವಿಶೇಷ ಉಡುಗೊರೆಯೊಂದನ್ನು ರಾಜಸ್ಥಾನ ಸರ್ಕಾರ ಘೋಷಿಸಿದೆ.
ರಕ್ಷಾ ಬಂಧನ ದಿನದಂದು ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸಬಹುದು. ರಾಜ್ಯಾದ್ಯಂತ ಸಂಚರಿಸುವ ಬಸ್​ಗಳಲ್ಲಿ ಈ ಸೌಲಭ್ಯ ಪಡೆಯಬಹುದು ಎಂದು ಸಿಎಂ ಅಶೋಕ್​ ಗೆಹ್ಲೋಟ್​ ಘೋಷಿಸಿದ್ದಾರೆ.
ಇದನ್ನೂ ಓದಿ;ರಾಜಸ್ಥಾನದಲ್ಲಿ ‘ಕುದುರೆ ವ್ಯಾಪಾರ’ಕ್ಕೆ ಅನ್​ಲಿಮಿಟೆಡ್​ ಆಫರ್​; ವಿಧಾನಸಭೆ ಅಧಿವೇಶನ ನಿಗದಿ ಬಳಿಕ ಬೆಲೆಯಲ್ಲಿ ಭಾರಿ ಏರಿಕೆ
ಆದರೆ, ಈ ಸೌಲಭ್ಯ ಹವಾನಿಯಂತ್ರಿತ, ವೋಲ್ವೋ ಹಾಗೂ ಆಲ್​ ಇಂಡಿಯಾ ಪರ್ಮಿಟ್​ ಪಡೆದಿರುವ ಬಸ್​ಗಳಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ರಾಜ್ಯದ ಒಳಗೆ ಎಲ್ಲಿ ಬೇಕಾದರೂ ಸಂಚರಿಸಬಹುದು ಎಂದು ಸರ್ಕಾರ ಹರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಕ್ಷಾ ಬಂಧನ ದಿನಂದು ಸಂಚರಿಸುವ ಮಹಿಳೆಯರ ಟಿಕೆಟ್​ ಶುಲ್ಕವನ್ನು ಸರ್ಕಾರದಿಂದ ಭರಿಸಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಈ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಸಾರಿಗೆ ಸಂಸ್ಥೆ ಮಾಹಿತಿ ನೀಡಿದೆ.
ಮತ್ತೊಂದು ಆಘಾತಕಾರಿ ಹಂತ ತಲುಪಿದ ಕರೊನಾ; ಭಾರತದ ಮೊದಲ ಪ್ರಕರಣ ವರದಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen + 10 =
Remember me
