ಮುಂಬೈ :ದೇಶದಲ್ಲಿ ಕರೊನಾದಿಂದ ಅತಿ ಹೆಚ್ಚು ಹಾನಿಗೊಳಗಾದ ರಾಜ್ಯವಾದ ಮಹಾರಾಷ್ಟ್ರವು ಕಳೆದ ಕೆಲವು ದಿನಗಳಿಂದ ದಿನಕ್ಕೆ 60,000 ಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನು ವರದಿ ಮಾಡುತ್ತಿದೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ನಿವಾಸಿಗಳಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಘೋಷಿಸಿದ್ದಾರೆ.
ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕರೊನಾ ಲಸಿಕಾ ಅಭಿಯಾನವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಕೇಂದ್ರ ಸರ್ಕಾರವು ರಾಜ್ಯಗಳಿಗೆ ಉಚಿತವಾಗಿ ನೀಡುವ ಲಸಿಕೆಗಳೊಂದಿಗೆ ರಾಜ್ಯ ಸರ್ಕಾರಗಳು ಸ್ವತಃ ಉತ್ಪಾದಕರಿಂದ ನೇರವಾಗಿ ಲಸಿಕೆ ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ.
ಇದನ್ನೂ ಓದಿ:ಕೇಂದ್ರ ಸಚಿವ ಬಾಬುಲ್ ಸುಪ್ರಿಯೋಗೆ ಕರೊನಾ ಪಾಸಿಟೀವ್; ಟಿಎಂಸಿ ಅಭ್ಯರ್ಥಿ ಸಾವು
ಉತ್ಪಾದಕರಿಂದ ಲಸಿಕೆಯನ್ನು ಖರೀದಿಸಿ ತನ್ನ ಜನರಿಗೆ ಉಚಿತವಾಗಿ ಲಸಿಕೆ ನೀಡುವ ನಿರ್ಧಾರಗಳನ್ನು ಈಗಾಗಲೇ ಉತ್ತರಾಖಂಡ್ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಪ್ರಕಟಿಸಿದ್ದವು. ಇದೀಗ ಮಹಾರಾಷ್ಟ್ರ ಕೂಡ ಅದೇ ದಾರಿ ಅನುಸರಿಸುತ್ತಿದೆ. ಈ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ ನವಾಬ್ ಮಲಿಕ್, ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌ಗಳನ್ನು ಕರೆಯಲಾಗುವುದು ಎಂದಿದ್ದಾರೆ.(ಏಜೆನ್ಸೀಸ್)
551 ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳು

ಕೋವಾಕ್ಸಿನ್ ಹೆಚ್ಚು ದುಬಾರಿ ! ಖಾಸಗಿ ಆಸ್ಪತ್ರೆಗಳಿಗೆ ಒಂದು ಡೋಸ್​​ಗೆ 1,200 ರೂ. ದರ ನಿಗದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 1 =
Remember me
