ಇಂಫಾಲ್:ಗಲಭೆ ಪೀಡಿತ ಮಣಿಪುರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದಿದ್ದು, ಎರಡು ಮನೆ ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಉದ್ರಿಕ್ತರ ಗುಂಪು ಹಲವು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯು ಮಣಿಪುರದ ಪಶ್ಚಿಮ ಇಂಫಾಲ್​ ಜಿಲ್ಲೆಯ ನ್ಯೂ ಕೀಥೆಲ್ಮನ್ಬಿ ಪಟ್ಸೋಯಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ 10 ಘಂಟೆ ಸುಮಾರಿಗೆ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಪ್ರದೇಶದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿಯೊಂದಿಗಿನ ಮೈತ್ರಿ ಕಡಿತ; ಕೊನೆಗೂ ಮೌನ ಮುರಿದ ಎಐಎಡಿಎಂಕೆ
ಘಟನೆಯ ನಂತರ ಮೈತಿ ಮಹಿಳೆಯರ ಗುಂಪೊಂದು ಪ್ರದೇಶದಲ್ಲಿ ಜಮಾಯಿಸಿತು. ಆದರೆ ಭದ್ರತಾ ಪಡೆಗಳು ಅವರು ಮತ್ತಷ್ಟು ಮುಂದುವರಿಯದಂತೆ ತಡೆದಿದ್ದಾರೆ.  ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೇ 3ರಮದು ಮೈತೇಯಿ ಹಾಗೂ ಕುಕಿ ಸಮುದಾಯದ ನಡುವೇ ಆರಂಭವಾದ ಜನಾಂಗೀಯ ಘರ್ಷಣೆಯಲ್ಲಿ ಈವರೆಗೆ 180ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − three =
Remember me
