ಇಂಫಾಲ್:ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು ರಾಜ್ಯದ ಜಿರಿಬಾಮ್‌ನಲ್ಲಿ ಸಶಸ್ತ್ರ ಗುಂಪುಗಳ ನಡುವಿನ ಗುಂಡಿನ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಎರಡು ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಶನಿವಾರ (ಸೆಪ್ಟೆಂಬರ್​ 7) ಐವರು ಸಾವನ್ನಪ್ಪಿರುವುದಾಗಿ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ:ಪತಿ ಸೇರಿ 50 ಪುರುಷರಿಂದ ಅತ್ಯಾಚಾರ; ಕೋರ್ಟ್​​ನಲ್ಲಿ ಬೆಚ್ಚಿಬೀಳಿಸುವ ಸಂಗತಿ ಬಿಚ್ಚಿಟ್ಟ ಮಹಿಳೆ..
ಜಿಲ್ಲಾ ಕೇಂದ್ರದಿಂದ ಐದು ಕಿಲೋಮೀಟರ್ ದೂರದಲ್ಲಿ ಪ್ರತ್ಯೇಕ ಸ್ಥಳದಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ಉಗ್ರರು, ಮಲಗಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ. ಇದಾದ ಬಳಿಕ ಜಿಲ್ಲಾ ಕೇಂದ್ರದಿಂದ ಸುಮಾರು ಏಳು ಕಿಲೋಮೀಟರ್​ ದೂರದಲ್ಲಿರುವ ಬೆಟ್ಟಗಳಲ್ಲಿ ಕಾದಾಟ ನಡೆಸುವ ಸಮುದಾಯಗಳ ವ್ಯಕ್ತಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮೃತಪಟ್ಟಿರುವುದಾಗಿ ಪೊಲೀಸ್​ ಮೂಲಗಳು ತಿಳಿಸಿವೆ.
ಅಸ್ಸಾಂ ರೈಫಲ್ಸ್​​, ಇತರ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿ ಮತ್ತು ಮಣಿಪುರ ಪೊಲೀಸ್ ಕಮಾಂಡೋಗಳ ದೊಡ್ಡ ತುಕಡಿಯು ಹಿಂಸಾಚಾರ ನಡೆಡ ಘಟನಾ ಸ್ಥಳಗಳಿಗೆ ತಲುಪಿದೆ. ಶಂಕಿತ ಕುಕಿ ಉಗ್ರರು ಮಂಗಳವಾರದಿಂದ ಜಿರಿಬಾಮ್ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ದಾಳಿ ಆರಂಭಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದ ಮೈಥೇಯಿ ಸಮುದಾಯಕ್ಕೆ ಸೇರಿದ ವೃದ್ಧರೊಬ್ಬರನ್ನು ಹತ್ಯೆ ಮಾಡಿದ್ದಾರೆ. ನಂತರ ಪ್ರತಿದಾಳಿಯಲ್ಲಿ ನಾಲ್ವರು ಕುಕಿ ಉಗ್ರರು ಹತರಾಗಿದ್ದಾರೆ. ಆದರೆ ಪ್ರತಿದಾಳಿ ನಡೆಸಿದವರು ಯಾರು ಎಂಬುದು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರು ಕಾರ್ಮಿಕರು ಉಗ್ರಗಾಮಿಗಳಲ್ಲ. ಅವರು ಗ್ರಾಮ ಸ್ವಯಂಸೇವಕರು ಎಂದು ಕುಕಿ ಬುಡಕಟ್ಟು ಮುಖಂಡರು ಹೇಳಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ನಡೆಯುತ್ತಿವೆ. ಪ್ರಸ್ತುತ ಘಟನೆಯು ಹಿಂಸಾಚಾರದ ಮತ್ತೊಂದು ಅಲೆಯಾಗಿದ್ದು ಕಳೆದ ಐದು ದಿನಗಳಲ್ಲಿ ಪರಿಸ್ಥಿತಿ ತೀವ್ರ ಉದ್ವಿಗ್ನವಾಗಿದೆ.(ಏಜೆನ್ಸೀಸ್​​)
ವೈರಲ್​ ವಿಡಿಯೋ; ಊಟ ನೀಡಲು ನಿರಾಕರಿಸಿದ ಹೋಟೆಲ್​​ಗೆ ಟ್ರಕ್​ ನುಗ್ಗಿಸಿದ ಚಾಲಕ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:five × one =
Remember me
