ಭೋಪಾಲ್:ಪ್ರಿಯತಮೆಯಿಂದಾಗಿ ಸಾಕಷ್ಟು ಬೇಸರಗೊಂಡಿದ್ದ ವ್ಯಕ್ತಿಯೊಬ್ಬ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಿ ಜಮೀನಿನಲ್ಲಿ ಹೂತಿಟ್ಟಿರುವ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದಿದೆ.
ಮಮತಾ (45), ರೂಪಾಲಿ (21), ದಿವ್ಯಾ (14) ಪೂಜಾ (15) ಹಾಗೂ ಪವನ್ ಮೃತ ದುರ್ದೈವಿಗಳು. ಈ ಐವರು ಮೇ 13ರಿಂದ ಕಾಣೆಯಾಗಿದ್ದಾಗಿ ಪೊಲೀಸ್​ ದೂರು ದಾಖಲಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಸುರೇಂದ್ರ ಹೆಸರಿನ ವ್ಯಕ್ತಿಯ ಜಮೀನಿನಲ್ಲಿ ಐದು ಮೃತದೇಹಗಳು ಸಿಕ್ಕಿವೆ. ಜಮೀನಿನಲ್ಲಿ ಗುಂಡಿ ತೋಡಿ ಸುಮಾರು 10 ಅಡಿ ಕೆಳಗೆ ಹೆಣಗಳನ್ನು ಹೂತಿಟ್ಟಿದ್ದು, ಅದನ್ನು ಪೊಲೀಸರು ಹೊರ ತೆಗೆಸಿದ್ದಾರೆ.
ಸುರೇಂದ್ರ ಯುವತಿಯೊಬ್ಬಳನ್ನು ಪ್ರೀತಿಸಿದ್ದು, ಆಕೆಯೊಂದಿಗೆ ಯಾವಾಗಲೂ ಜಗಳವಾಗುತ್ತಿತ್ತಂತೆ. ಅದೇ ಹಿನ್ನೆಲೆಯಲ್ಲಿ ಸಾಕಷ್ಟು ಬೇಸರಗೊಂಡಿದ್ದ ಆತ ಕೆಲ ಸ್ನೇಹಿತರ ಜತೆ ಸೇರಿಕೊಂಡು ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆತ ಪ್ರೀತಿಸಿದ್ದು ಮೃತ ರೂಪಾಲಿಯನ್ನೇ ಎನ್ನುವ ಮಾತುಗಳು ಕೇಳಿಬಂದಿವೆ. ಆದರೆ ಒಂದೇ ಕುಟುಂಬದ ಐವರನ್ನು ಕೊಲೆ ಮಾಡುವುದಕ್ಕೆ ನಿಖರ ಕಾರಣ ಏನೂ ಎನ್ನುವುದು ಇನ್ನೂ ತಿಳಿದುಬಂದಿಲ್ಲ. (ಏಜೆನ್ಸೀಸ್)
11 ವಯಸ್ಸಿಗೇ ಮಗುವಿಗೆ ಜನ್ಮವಿತ್ತ ಬಾಲಕಿ! ಇದು ಹೇಗಾಗಿದ್ದು ಎಂದು ತಲೆ ಕೆಡಿಸಿಕೊಂಡಿರುವ ಕುಟುಂಬ

ಕರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಮೊತ್ತ ನಿಗದಿಪಡಿಸಿ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 7 =
Remember me
