ಶ್ರೀಹರಿಕೋಟಾ:ಇಸ್ರೋದ ಮಹತ್ವಾಕಾಂಕ್ಷಿ ಗಗನಯಾನಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾನವ ರಹಿತ ಪರೀಕ್ಷಾ ವಾಹನದ ಉಡಾವಣೆ ಯಶಸ್ವಿಯಾಗಿ ನಡೆದಿದೆ.
ಶನಿವಾರ ಬೆಳಗ್ಗೆ 8 ಗಂಟೆಗೆ ಉಡಾವಣೆಯಾಗಬೇಕಿದ್ದ, ಬಳಿಕ ಕೆಲ ಕಾಲ ಮುಂದೂಡಿಕೆಯಾಗಿದ್ದ ಇಸ್ರೋದ ಗಗನಯಾನ ಮಿಷನ್‌ ಲಾಂಛ್‌ ಬೆಳಗ್ಗೆ 10 ಗಂಟೆಗೆ ಯಶಸ್ವಿಯಾಗಿದೆ.
ಆಂಧ್ರದ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ನಭಕ್ಕೆ ಚಿಮ್ಮಿದ ರಾಕೆಟ್‌ 17 ಕಿ.ಮೀ. ಎತ್ತರದಲ್ಲಿ ಗಗನಯಾನ ನೌಕೆಯನ್ನು ಬೇರ್ಪಟ್ಟಿದೆ. ಬಳಿಕ ನೌಕೆ ಪ್ಯಾರಾಚೂಟ್‌ ಸಹಾಯದಿಂದ ಬಂಗಾಳಕೊಲ್ಲಿಯಲ್ಲಿ ಇಳಿದಿದ್ದು, ಅಲ್ಲಿಂದ ಅದನ್ನು ಹಡಗಿನ ಮೂಲಕ ವಶಕ್ಕೆ ಪಡೆಯಲಾಗಿದೆ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಹವಾಮಾನ ಸಮಸ್ಯೆಯಿಂದಾಗಿ ಪರೀಕ್ಷಾ ಉಡಾವಣೆಯು ಮುಂಜಾನೆಯೇ ತಡವಾಗಿತ್ತು. ಇಂಜಿನ್ ಇಗ್ನಿಷನ್ ಆಗಲಿಲ್ಲ. ಏನು ತಪ್ಪಾಗಿದೆ ಎಂಬುದನ್ನು ನಾವು ಕಂಡುಹಿಡಿಯಬೇಕು. ಈಗ ಸುರಕ್ಷಿತವಾಗಿದೆ ಎಂದು ಸೋಮನಾಥ್ ಅವರು ಲೈವ್‌ಸ್ಟ್ರೀಮ್‌ನಲ್ಲಿ ಹೇಳಿದರು.

ನೌಕೆ ಉಡಾವಣೆ ಪರೀಕ್ಷೆ ನಡೆದಿದ್ದೇಗೆ?:ಶನಿವಾರ ಬೆಳಗ್ಗೆ ಸತೀಶ್‌ ಧವನ್‌ ಉಡಾವಣಾ ಕೇಂದ್ರದಲ್ಲಿರುವ ಒಂದನೇ ಲಾಂಚ್‌ ಪ್ಯಾಡ್‌ನಿಂದ ಈ ಪರೀಕ್ಷೆಗಾಗಿಯೇ ತಯಾರಿಸಲಾಗಿರುವ ರಾಕೆಟ್‌, ಗಗನಯಾನ ನೌಕೆಯ ಮಾಡೆಲನ್ನು ಹೊತ್ತು ಉಡಾವಣೆಯಾಗಿದೆ. 1 ನಿಮಿಷದ ಬಳಿಕ 11.7 ಕಿ.ಮೀ. ಎತ್ತರಕ್ಕೆ ಸಾಗುವ ರಾಕೆಟ್‌ ನೌಕೆಯಿಂದ ಬೇರ್ಪಟ್ಟಿದೆ. ಒಂದೂವರೆ ನಿಮಿಷಕ್ಕೆ 16 ಕಿ.ಮೀ. ಎತ್ತರಕ್ಕೆ ತಲುಪುವ ಗಗನಯಾನ ಕ್ರ್ಯೂ ಮಾಡ್ಯೂಲ್‌ ಇದಾದ ಬಳಿಕ ಮೇಲ್ಭಾಗದಲ್ಲಿ ಅಳವಡಿಸಲಾಗಿರುವ ಬೂಸ್ಟರ್‌ನಿಂದಲೂ ಬೇರ್ಪಟ್ಟು ಭೂಮಿಯತ್ತ ಬೀಳಲು ಆರಂಭಿಸುತ್ತದೆ.
ಈ ಹಂತದಲ್ಲಿ ಗಗನಯಾನ ನೌಕೆ ಮತ್ತು ಸಿಬ್ಬಂದಿಗಳನ್ನು ರಕ್ಷಿಸಲು ಇರುವ ಉಪಕರಣ ಎರಡೂ ಪ್ರತ್ಯೇಕಗೊಂಡು ಸಮುದ್ರದತ್ತ ಧಾವಿಸಿದೆ. ಹೀಗೆ ರಾಕೆಟ್‌ನಿಂದ ಬೇರ್ಪಟ್ಟ 5 ಸೆಕೆಂಡ್‌ ಬಳಿಕ ನೌಕೆಯಲ್ಲಿರುವ ಪ್ಯಾರಾಚೂಟ್‌ ಬಿಚ್ಚಿಕೊಂಡಿದ್ದು, ನೌಕೆಯ ವೇಗವನ್ನು ನಿಯಂತ್ರಿಸಿ ಭೂಮಿಯತ್ತ ತರಲಿದೆ. 3 ನಿಮಿಷಗಳ ಕಾಲ ಈ ಪ್ಯಾರಾಚೂಟ್‌ನ ಸಹಾಯದಿಂದ ನೌಕೆ ಇಳಿದಿದೆ. ಬಳಿಕ ಮತ್ತೊಂದು ಶಕ್ತಿಶಾಲಿ ಪ್ಯಾರಾಚೂಟ್‌ ತೆರೆದುಕೊಂಡಿದ್ದು, ನೌಕೆಯನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಇಳಿದಿದೆ.
ಈ ಪರೀಕ್ಷೆ ಕೇವಲ 9 ನಿಮಿಷಗಳಲ್ಲಿ ಮುಕ್ತಾಯಗೊಂಡಿದ್ದು, ಉಡ್ಡಯನ ಸ್ಥಳದಿಂದ 10 ಕಿ.ಮೀ ದೂರದ ಬಂಗಾಳಕೊಲ್ಲಿಯಿಂದ ನೌಕೆಯನ್ನು ಸುರಕ್ಷಿತವಾಗಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಪರೀಕ್ಷೆಯನ್ನು ನಡೆಸುವುಕ್ಕೆ ಮೊದಲೇ ಇಸ್ರೋ, ನೌಕೆಯನ್ನು ಹಲವು ಬಾರಿ ಪರೀಕ್ಷೆಗೆ ಒಳಪಡಿಸಿದೆ. ಜೊತೆಗೆ ಎಂಜಿನ್‌, ಪ್ಯಾರಾಚೂಟ್‌ ಮತ್ತು ನೌಕೆಯ ವಶ ಎಲ್ಲದರ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದು, ಕೊನೆಯದಾಗಿ ಈ ಮಾನವ ರಹಿತ ಗಗನಯಾನದ ಪರೀಕ್ಷೆ ನಡೆಸಲಾಗಿದೆ.
ಗಗನಯಾನ ಮಿಷನ್​: ಕೊನೆಯ ಐದು ಸೆಕೆಂಡ್​ನಲ್ಲಿ ಟಿವಿ-ಡಿ1 ರಾಕೆಟ್ ಉಡಾವಣೆಗೆ ತಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 1 =
Remember me
