ನವ ದೆಹಲಿ:ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕಲೆವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಇದೀಗ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿರುವ ಶಶಿ ತರೂರ್ ಗಾಂಧಿ ಕುಟುಂಬದ ಆಶೀರ್ವಾದ ನಮ್ಮ ಮೇಲಿದೆ. ನನ್ನ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಗಾಂಧಿ ಕುಟುಂಬಕ್ಕೆ ಯಾವುದೇ ಪಕ್ಷಪಾತ ಧೋರಣೆಯಲ್ಲ ಎಂದು ಶಶಿ ತರೂರ್ ಹೇಳಿದ್ದಾರೆ.
ನಾವಿಬ್ಬರು ಸ್ಪರ್ಧೆ ಮಾಡುತ್ತಿರುವುದು ರಾಷ್ಟ್ರೀಯ ಪಕ್ಷ ಕಾಂಗ್ರೆಸ್​ನ ಅಧ್ಯಕ್ಷ ಸ್ಥಾನಕ್ಕೆ. ನಮ್ಮಿಬ್ಬರ ಉದ್ಧೇಶ ಒಂದೇ. ಪಕ್ಷವನ್ನು ಬಲಿಷ್ಠವಾಗಿ ಮುನ್ನಡೆಸುವುದು. ಇದಕ್ಕಾಗಿ ನನ್ನ ಮತ್ತು ಖರ್ಗೆಯವರ ಪ್ರಯತ್ನ ಮುಂದುವರಿಯುತ್ತದೆ ಎಂದು ಶಶಿ ತರೂರ್ ಹೇಳಿಕೆ ನೀಡಿದ್ದಾರೆ.
2024ರ ಲೋಕಸಭಾ ಚುನಾವಣೆಯ ಸಲುವಾಗಿ ದೇಶದಾದ್ಯಂತ ಹಲವು ಭಾಗದಲ್ಲಿ ಚುನಾವಣಾ ಸಮೀಕ್ಷೆ ನಡೆಯುತ್ತಿದೆ. ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಯ ವೇಳೆಗೆ ಇನ್ನಷ್ಟು ಬಲಿಷ್ಠವಾಗಲಿದೆ ಎಂದು ಹೇಳುತ್ತಿವೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ ಗೆಲುವು ಖಚಿತ. ಹೀಗಾಗಿ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲು ಬಿಜೆಪಿ ಇಂದಿನಿಂದಲೇ ತಯಾರಿ ನಡೆಸುವುದು ಒಳಿತು ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + twelve =
Remember me
