ಪಟ್ನಾ:ಇತ್ತೀಚಿನ ವರ್ಷಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಜನರನ್ನು ಮೋಸ ಮಾಡುತ್ತಿರುವ ಜಾಲಗಳು ಸಕ್ರಿಯವಾಗಿದ್ದು, ಜನರಿಗೆ ನಿರಂತರವಾಗಿ ಮೋಸ ಮಾಡುತ್ತಿರುತ್ತವೆ. ಇದೀಗ ಅದೇ ರೀತಿಯ ಘಟನೆಯೊಂದು ಬಿಹಾರದ ಮುಜಾಫರ್​ಪುರ ಜಿಲ್ಲೆಯಲ್ಲಿ ನಡೆದಿದ್ದು, ಉದ್ಯೋಗ ಕೊಡಿಸುವುದಾಗಿ ನಂಬಿಸಿ 200ಕ್ಕೂ ಹೆಚ್ಚು ಯುವತಿಯರ ಮೇಲೆ ಅತ್ಯಾಚಾರ ಎಸಗಿ ಅವರನ್ನು ಗುಂಪೊಂದು ಬಂಧಿಯಾಗಿ ಇರಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ 09 ಮಂದಿ ಆರೋಪಿಗಳು ತಲೆಮಾರಿಸಿಕೊಂಡಿದ್ದು, ಪೊಲೀಸರು ಯುವತಿಯರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತ ಆರೋಪಿಗಳ ಪತ್ತೆಗೆ ಬಲೆ ಬೀಸಿರುವ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರೋಪಿಗಳು ಸಂತ್ರಸ್ತೆಯರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಬಕ್ರೀದ್​ಗೆ ಶುಭಾಶಯ ಕೋರಿದ ಪೋಸ್ಟರ್​ನಲ್ಲಿ ಹಸು ಚಿತ್ರ ಬಳಕೆ; ಕಾಂಗ್ರೆಸ್​ ಶಾಸಕನ ನಡೆಗೆ ಕಿಡಿಕಾರಿದ ಜನರು
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ಉಪವರಿಷ್ಠಾಧಿಕಾರಿ ವಿನಿತಾ ಸಿನ್ಹಾ, ಆರೋಪಿಗಳು 2022ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಉದ್ಯೋಗದ ಜಾಹೀರಾತುಗಳನ್ನು ನೀಡಿ, ಮುಜಾಫರ್‌ಪುರಕ್ಕೆ ಭೇಟಿ ನೀಡುವಂತೆ ತಿಳಿಸಿದ್ದರು. ಇದನ್ನು ನೋಡಿ ಉದ್ಯೋಗ ಸಿಗುತ್ತದೆ ಎಂದು ಬಂದ ಆಕಾಂಕ್ಷಿಗಳನ್ನು ಆರೋಪಿಗಳು ಕೋಣೆ ಒಂದರಲ್ಲಿ ಕೂಡಿ ಹಾಕುತ್ತಿದ್ದರು. ಅಲ್ಲಿಂದ ಅವರನ್ನು ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದರು.
ಬಳಿಕ ಆರೋಪಿಗಳು ತಿಂಗಳುಗಳಗಟ್ಟಲೇ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಗರ್ಭಪಾತ ಮಾಡಿಸಿಕೊಳ್ಳುವಂತೆ ಬಲವಂತ ಮಾಡಿದ್ದಾರೆ. ಕೆಲವು ಯುವತಿಯರು ತಪ್ಪಿಸಿಕೊಂಡಿದ್ದು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೊದಲಿಗೆ ಸ್ಥಳೀಯ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್​ ಉಪವರಿಷ್ಠಾಧಿಕಾರಿ ವಿನಿತಾ ಸಿನ್ಹಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
