ಪುಣೆ:ಕುಖ್ಯಾತ ಗ್ಯಾಂಗ್​ಸ್ಟರ್​ ಒಬ್ಬನನ್ನು ಆತನ ಸಹಚರರೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದಿದೆ. ಶರದ್​ ಮೊಹೋಲ್​ (40) ಹತ್ಯೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಶರದ್​ ಹತ್ಯೆಗೆ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮೂರು ಪಿಸ್ತೂಲ್​ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕಾನೂನು ಸುವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳನ್ನು ನೆಟ್ಟಿಗರು ಎತ್ತಿದ್ದಾರೆ.
Gangster#SharadMoholwas shot dead by members of his gang in#Puneyesterday over a financial dispute.A video has now emerged that shows a group of men firing at Sharad Mohol from close range in a narrow lane in Pune's#Kothrud.As Sharad Mohol falls to the ground after being…pic.twitter.com/KfthqI9Cff
ಇದನ್ನೂ ಓದಿ:ಕ್ಷುಲಕ ಕಾರಣಕ್ಕೆ ಪಂದ್ಯವನ್ನು ಕೆಲಕಾಲ ಸ್ಥಗಿತಗೊಳಿಸಿದ ಸ್ಟೀವ್​ ಸ್ಮಿತ್​; ವಿಡಿಯೋ ವೈರಲ್
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಶುಕ್ರವಾರ ಮಧ್ಯಾಹ್ನ 1 ಘಂಟೆ ಸುಮಾರಿಗೆ ಹತ್ಯೆ ನಡೆದಿದ್ದು, ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಒಂದು ಗುಂಡು ಎದ್ದೆಗೆ ಬಿದ್ದಿದ್ದು, ಇನ್ನೆರಡು ಗುಂಡು ಬಲ ಭುಜ ಹೊಕ್ಕಿವೆ. ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಡಕಾಯಿತಿ, ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶರದ್​ ಮೊಹೋಲ್​ ಪ್ರಮುಖ ಆರೋಪಿಯಾಗಿದ್ದ. ಜಮೀನು ಮತ್ತು ಹಣಕಾಸಿನ ವಿಚಾರವಾಗಿ ಶರದ್​ ಹಾಗೂ ಆತನ ಸಹಚರರ ನಡುವೆ ಮನಸ್ತಾಪ ಉಂಟಾಗಿತ್ತು. ಇದೇ ಕಾರಣಕ್ಕೆ ಹತ್ಯೆ ನಡೆದಿರಬಹುದು ಎಂದು ಹೇಳಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + fourteen =
Remember me
