ಪಶ್ಚಿಮ ಬಂಗಾಳ:ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಭೀಕರ ಅತ್ಯಾಚಾರ ಹಾಗೂ ಹತ್ಯೆ ಘಟನೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಕೈಗೊಂಡಿರುವ ವೈದ್ಯಕೀಯ ಸಿಬ್ಬಂದಿ ಇಂದೂ ಕೂಡ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಯುವತಿಯ ಮೇಲೆ ಬರ್ಬರವಾಗಿ ಅತ್ಯಾಚಾರವೆಸಗಿ, ಕೊಲೆ ಮಾಡಿದ ಅಪರಾಧಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ದೇಶಾದ್ಯಂತ ಒತ್ತಾಯದ ಕೂಗುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಈಗಾಗಲೇ ಪ್ರಕರಣವನ್ನು ಆ.14ರಂದು ಕೈಗೆತ್ತಿಕೊಂಡಿರುವ ಸಿಬಿಐ ತನಿಖೆಯನ್ನು ಇದೀಗ ಮತ್ತಷ್ಟು ಚುರುಕುಗೊಳಿಸಿದೆ. ಈ ಮಧ್ಯೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಘಟನೆಗೆ ಪ್ರತಿಕ್ರಿಯಿಸಿದ್ದು, ಇದು ನನ್ನ ಹೊಸ ಡಿಪಿ ಎಂದು ಕಪ್ಪು ಬಣ್ಣವನ್ನು ತೋರಿಸಿದ್ದಾರೆ.
ಇದನ್ನೂ ಓದಿ:ಹೊರಗುತ್ತಿಗೆ ನೌಕರರಿಗಾಗುತ್ತಿರುವ ಶೋಷಣೆ ತಪ್ಪಿಸಿ: ನಗರದ ಡಿಸಿ ಕಚೇರಿ ಎದುರು ಪ್ರತಿಭಟನಾ ಧರಣಿ
ಆಗಸ್ಟ್​ 16ರಂದು 24 ಗಂಟೆಗಳ ಕಾಲ ದೇಶವ್ಯಾಪಿ ಮೆಡಿಕಲ್ ಸೇವೆಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ತಮ್ಮ ಸಮಸ್ಯೆಯನ್ನು ಒತ್ತಿ ಹೇಳಿದ ಮಹಿಳಾ ವೈದ್ಯರು, ಮೃತಪಟ್ಟ ಟ್ರೈನಿ ವೈದ್ಯೆಯ ಸಾವಿಗೆ ನ್ಯಾಯ ಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಈ ಬೆನ್ನಲ್ಲೇ ಪ್ರತಿಕ್ರಿಯಿಸಿದ ಗಂಗೂಲಿ, ಇದೊಂದು ಹೀನಾಯ ಕೃತ್ಯ. ಇಂತಹ ಘಟನೆ ನಡೆಯಬಾರದಿತ್ತು. ಇದು ತುಂಬ ನಾಚಿಕೆಗೇಡಿನ ಸಂಗತಿ. ಸದ್ಯ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ. ಅಪರಾಧಿಯನ್ನು ಪತ್ತೆಹಚ್ಚಿದ ಬಳಿಕ ನ್ಯಾಯಾಲಯವು ಅವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿದರು.
ಈ ಬಾರಿ ನ್ಯಾಯಾಲಯ​ ಕೊಡುವ ಶಿಕ್ಷೆಯು ಮುಂದೆ ಇಂತಹ ಅಪರಾಧ ಮಾಡಲು ಯಾರಿಗೂ ಧೈರ್ಯ ಬರಬಾರದು. ಅಂತಹ ಶಿಕ್ಷೆ ವಿಧಿಸಬೇಕು, ಅದು ಮುಖ್ಯ ಎಂದರು. ನಿರಂತರ ಪ್ರತಿಭಟನೆ ಬೆನ್ನಲ್ಲೇ ಇದೀಗ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಿಗೆ ಕಪ್ಪು ಬಣ್ಣದ ಡಿಪಿಯನ್ನು ಹಾಕಿದ್ದಾರೆ. ಈ ಮೂಲಕ ತಾವು ಕೂಡ ಪ್ರತಿಭಟನೆಗೆ ಕೈಜೋಡಿಸಿದ್ದೇನೆ. ನ್ಯಾಯಕ್ಕಾಗಿ ಹೋರಾಟ ಮುಂದುವರೆಸುತ್ತೇನೆ ಎಂದು ತಿಳಿಸಿದ್ದಾರೆ,(ಏಜೆನ್ಸೀಸ್).
ಅಪಘಾತದಲ್ಲಿ ಯುವಕನ ಮಿದುಳು ನಿಷ್ಕ್ರೀಯ; ನೇತ್ರದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಹೆತ್ತವರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
