ನವದೆಹಲಿ:ಮೆಟ್ರೋ ರೈಲಿನೊಳಗೆ ಯುವತಿಯೊಬ್ಬಳು ಸಾಂಪ್ರಾದಾಯಿಕ ಉಡುಗೆ ತೊಟ್ಟು ಗರ್ಭಾ ಡ್ಯಾನ್ಸ್​ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ. ಈ ಘಟನೆ ದೆಹಲಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಎಲ್ಲರಲ್ಲೂ ಭಾರತೀಯರೆಂಬ ಭಾವ ಮೂಡಲಿ, ಡಾ.ಶ್ರೀಮಹಾದೇವ ಸ್ವಾಮೀಜಿ ಸಲಹೆ
ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲಿನಲ್ಲಿ ರೀಲ್ಸ್​ ಮಾಡುವ ಪ್ರವೃತ್ತಿ ಹೆಚ್ಚಿದ್ದು, ಈ ರೀತಿಯ ಘಟನೆಗಳು ಸಾಕಷ್ಟು ವರದಿಯಾಗಿದೆ. ಇದೀಗ ಈ ಸಾಲಿಗೆ ಮತ್ತೊಂದು ಘಟನೆ ಸೇರ್ಪಡೆಗೊಂಡಿದೆ. ಮೆಟ್ರೋ ರೈಲಿನೊಳಗೆ ಅನೇಕ ಪ್ರಯಾಣಿಕರ ಮಧ್ಯೆ ರಿಯಾ ಎಂಬ ಯುವತಿ ಗುಜರಾತಿ ಸಾಂಪ್ರದಾಯಿಕ ಉಡುಗೆ ಧರಿಸಿ, ಗಾರ್ಭಾ ನೃತ್ಯವನ್ನು ಮಾಡಿದ್ದಾರೆ. ಈ ವಿಡಿಯೋವನ್ನು ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.
A post shared by 👩RiYa Ejner 👩 (@garbaqueen_riya)
ವಿಡಿಯೋ ವ್ಯಾಪಕವಾಗಿ ವೈರಲ್ ಆಗಿದ್ದು, ದೃಶ್ಯ ನೋಡಿದ ನೆಟ್ಟಿಗರು ಯುವತಿಯ ನರ್ತನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವರು ಇದನ್ನು ವಿರೋಧಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಮಾಡುವುದರಿಂದ ಹಲವರಿಗೆ ಮುಜುಗರ ಉಂಟಾಗುತ್ತದೆ. ಇದೆಲ್ಲವೂ ಶೀಘ್ರವೇ ಅಂತ್ಯವಾಗಬೇಕು ಎಂದು ಕಮೆಂಟ್ ಮುಖೇನ ತಿಳಿಸಿದ್ದಾರೆ,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + sixteen =
Remember me
