ನವದೆಹಲಿ:ಹುರನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಉದ್ಯಮಿ ಗೌತಮ್ ಅದಾನಿ ಅವರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಶ್ರೀಮಂತ ಭಾರತೀಯ ಎನಿಸಿಕೊಂಡಿದ್ದಾರೆ.
ಇದನ್ನೂ ಓದಿ:ಜಗನ್‌ಗೆ ಭಾರೀ ಹಿನ್ನಡೆ: YSRCPಯ ಇಬ್ಬರು ರಾಜ್ಯಸಭಾ ಸದಸ್ಯರ ರಾಜೀನಾಮೆ: TDP ಸೇರುವ ಸಾಧ್ಯತೆ!
11.2 ಲಕ್ಷ ಕೋಟಿ ರೂ. ಸಂಪತ್ತನ್ನು ಹೊಂದಿರುವ ಉದ್ಯಮಿ ಗೌತಮ್ ಅದಾನಿ ಹಾಗೂ ಹುರುನ್ ಇಂಡಿಯಾ 2024 ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕುವ ಮೂಲಕ ಮೊದಲ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ವರ್ಷದ ಜುಲೈ 31 ರವರೆಗಿನ ಉದ್ಯಮಿಗಳ ಸಂಪತ್ತಿನ ಲೆಕ್ಕಾಚಾರವನ್ನು ಆಧರಿಸಿ 10.14 ಲಕ್ಷ ಕೋಟಿ ರೂ. ಸಂಪತ್ತನ್ನು ಹೊಂದಿರುವ ಮುಕೇಶ್ ಅಂಬಾನಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
Who Tops the 2024 Hurun India Rich List?
Gautam Adani leads the charge, followed by Mukesh Ambani and Shiv Nadar. But who else makes the top 10? Uncover the full lineup of India’s wealthiest individuals and see how fortunes have shifted.
For the complete list and exclusive…pic.twitter.com/PDQKlXEtDH
— HURUN INDIA (@HurunReportInd)August 29, 2024

ಈ ಪಟ್ಟಿಯಲ್ಲಿ ಇತರ ಪ್ರಮುಖ ಬಿಲಿಯನೇರ್‌ಗಳಾದ ಎಚ್‌ಸಿಎಲ್ ಟೆಕ್ನಾಲಜೀಸ್‌ನ ಶಿವ ನಾಡಾರ್ ಅವರು 3.14 ಲಕ್ಷ ಕೋಟಿ ರೂ.ಗಳೊಂದಿಗೆ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸೈರಸ್ ಎಸ್. ಪೂನಾವಲ್ಲ ನಾಲ್ಕನೇ ಸ್ಥಾನದಲ್ಲಿದ್ದಾರೆ. ಹಾಗೂ 2.49 ಲಕ್ಷ ಕೋಟಿ ರೂ. ಸಂಪತ್ತು ಹೊಂದಿರುವ ಸನ್ ಫಾರ್ಮಾಸ್ಯುಟಿಕಲ್ ಇಂಡಸ್ಟ್ರೀಸ್‌ನ ದಿಲೀಪ್ ಶಾಂಘ್ವಿ ಪಡೆದುಕೊಂಡಿದ್ದಾರೆ.
ದೇಶವು ಏಷ್ಯಾದ ಸಂಪತ್ತನ್ನು ಸೃಷ್ಟಿಸುವ ಒಂದು ಎಂಜಿನ್ ಆಗಿ ಹೊರಹೊಮ್ಮುತ್ತಿದೆ. ಜೊತೆಗೆ ಚೀನಾ ಶೇ.25 ರಷ್ಟು ಕುಸಿತ ಕಂಡಾಗಲೂ ಭಾರತ ಶೇ.29 ರಷ್ಟು ಏರಿಕೆಯನ್ನು ಕಂಡಿದೆ ಎಂದು ಹುರುನ್ ಸಂಸ್ಥಾಪಕ ಹಾಗೂ ಮುಖ್ಯ ಸಂಶೋಧಕ ಅನಸ್ ರೆಹಮಾನ್ ತಿಳಿಸಿದ್ದಾರೆ.

ದೇಶಾದ್ಯಂತ ಬಿಲಿಯನೇರ್ (ನೂರು ಕೋಟಿ) ಸಂಖ್ಯೆ ಹೆಚ್ಚಾಗಿದ್ದು, 334ಕ್ಕೆ ತಲುಪಿ ದಾಖಲೆ ನಿರ್ಮಿಸಿದೆ ಎಂದು ವರದಿಯೊಂದು ತಿಳಿಸಿದೆ. ಜೊತೆಗೆ ಕಳೆದ ವರ್ಷ ಭಾರತವು ಪ್ರತಿ ಐದು ದಿನಗಳಿಗೆ ಒಬ್ಬ ಬಿಲಿಯನೇರ್‌ನ್ನು ಉತ್ಪಾದಿಸುವ ಮೂಲಕ 259 ಬಿಲಿಯನೇರ್‌ಗಳನ್ನು ಹೊಂದಿತ್ತು ಎಂದು ತಿಳಿಸಿದೆ.
ಏಳು ವರ್ಷ ಹಿಂದಿನ ಬೆಳವಣಿಗೆಯನ್ನು ತುಲನೆ ಮಾಡಿದಾಗ ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯು ಶೇ.1520ರಷ್ಟು ಗಣನೀಯವಾಗಿ ವಿಸ್ತರಿಸಿದೆ. 1500 ವ್ಯಕ್ತಿಗಳು 1 ಸಾವಿರ ಕೋಟಿ ರೂ.ಗಿಂತಲೂ ಹೆಚ್ಚಿನ ಸಂಪತ್ತಿನ ಮೌಲ್ಯ ಹೊಂದಿದ್ದಾರೆ ಎಂದು ವರದಿಯೊಂದು ತಿಳಿದು ಬಂದಿದೆ.
ಚಿಂತಾಮಣಿ: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four − 3 =
Remember me
