ನವದೆಹಲಿ:ಉದ್ಯಮಿ ಗೌತಮ್ ಅದಾನಿ ಅವರ ಪುತ್ರ ಜೀತ್ ಅದಾನಿ ಕಳೆದ ಭಾನುವಾರ (ಮಾ.12) ದಿವಾ ಜೈಮಿನ್ ಶಾ ಎಂಬಾಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ನಿಶ್ಚಿತಾರ್ಥದಲ್ಲಿ ಎರಡೂ ಕುಟುಂಬಗಳ ಆಪ್ತರು ಮಾತ್ರ ಭಾಗಿಯಾಗಿದ್ದರು ಎಂದು ವರದಿಯಾಗಿದೆ.
ಜೀತ್ ಅದಾನಿ ಪ್ರಸ್ತುತ ಅದಾನಿ ಸಮೂಹದ ಹಣಕಾಸು ವಿಭಾಗದ ಉಪಾಧ್ಯಕ್ಷರಾಗಿದ್ದಾರೆ. ಅವರು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ಅನ್ವಯಿಕ ವಿಜ್ಞಾನಗಳ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ. ಜೀತ್ ಅದಾನಿ ಮದುವೆ ಆಗುತ್ತಿರುವ ದಿವಾ ಜೈಮಿನ್ ಶಾ, ಸಿ.ದಿನೇಶ್ & ಕೋ.ಪ್ರೈ.ಲಿ.ನ ವಜ್ರದ ವ್ಯಾಪಾರಿ ಜೈಮಿನ್ ಶಾ ಅವರ ಪುತ್ರಿ.
ಸದ್ಯ ಜೀತ್ ಅದಾನಿ ಮತ್ತು ದಿವಾ ಜೈಮಿನ್ ಅವರ ನಿಶ್ಚಿತಾರ್ಥ ಖಾಸಕಿಯಾಗಿ ನಡೆದಿದೆ. ಎರಡು ಶ್ರೀಮಂತ ಕುಟುಂಬಗಳ ನಡುವಿನ ವಿವಾಹ ಇದಾಗಿದ್ದು, ಅದ್ಧೂರಿಯಾಗಿ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಇವರಿಬ್ಬರ ವಿವಾಹ ಸಧ್ಯದಲ್ಲೇ ನಡೆಯಲಿದ್ದು, ದಿನಾಂಕ ಇನ್ನೂ ಬಹಿರಂಗಗೊಂಡಿಲ್ಲ. ಸದ್ಯ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.(ಏಜೆನ್ಸೀಸ್)
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:six + 9 =
Remember me
