ನವದೆಹಲಿ:ಟೀಮ್​ ಇಂಡಿಯಾ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್​ ಗಂಭೀರ್​ ರಾಜಕೀಯದಿಂದ ನಿವೃತ್ತರಾಗುವುದಾಗಿ ಘೋಷಿಸಿದ್ದಾರೆ. ದೆಹಲಿ ಪೂರ್ವ ಲೋಕಸಭೆ ಕ್ಷೇತ್ರದ ಸಂಸದರಾಗಿರುವ ಗೌತಮ್​ ಗಂಭೀರ್​ ಬಿಜೆಪಿ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಗೌತಮ್ ಗಂಭೀರ್, ತಮ್ಮನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವಿನಂತಿಸಿದ್ದಾರೆ.
I have requested Hon’ble Party President@JPNaddaji to relieve me of my political duties so that I can focus on my upcoming cricket commitments. I sincerely thank Hon’ble PM@narendramodiji and Hon’ble HM@AmitShahji for giving me the opportunity to serve the people. Jai Hind!
ಇದನ್ನೂ ಓದಿ:ಪಾಕ್​ ಪರ ಘೋಷಣೆ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​; FSL ವರದಿಯಲ್ಲಿ ಸತ್ಯ ಬಹಿರಂಗ
ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಜೀ ಅವರಿಗೆ ಮನವಿ ಮಾಡಿದ್ದೇನೆ. ಇದರಿಂದಾಗಿ ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ನಾನು ಗಮನಹರಿಸಬಹುದು. ನನಗೆ ಜನರ ಸೇವೆ ಮಾಡಲು ಅವಕಾಶ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್​ ಷಾ ಅವರಿಗೆ ಧನ್ಯವಾದಗಳು ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಸಂಸದರಾಗಿದ್ದ ವೇಳೆ ಐಪಿಎಲ್​ ಮೆಂಟರ್​, ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೌತಮ್​ ಗಂಭೀರ್​ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ನಿಮ್ಮನ್ನು ಕಚೇರಿಗಿಂತ ಕ್ರಿಕೆಟ್​ ಫೀಲ್ಡ್​ನಲ್ಲೇ ನಾವು ಹೆಚ್ಚಾಗಿ ನೋಡಿದ್ಧೇವೆ ಎಂದು ಸಾರ್ವಜನಿಕರು ಹಾಗೂ ವಿಪಕ್ಷಗಳು ಟೀಕಿಸಿದ್ದವು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 10 =
Remember me
