ಕೊಲಂಬೋ:ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ, ಬಿಜೆಪಿ ಸಂಸದ ಗೌತಮ್​ ಗಂಭೀರ್​ ಹಾಗೂ ಬ್ಯಾಟ್ಸ್​​ಮನ್​​ ವಿರಾಟ್​ ಕೊಹ್ಲಿ ನಡುವಿನ ಮುನಿಸು ನಿನ್ನೆ ಮೊನ್ನೆಯದಲ್ಲ. ಪ್ರತಿಬಾರಿ ಎದುರಾದಾಗಲು ಈ ಇಬ್ಬರ ನಡುವೆ ಒಂದಿಲ್ಲೊಂದು ವಿಚಾರಕ್ಕೆ ಜಗಳವಾಗಿರುವುದನ್ನ ನಾವು ನೋಡಿದ್ದೇವೆ.
ಇದೀಗ ಹೊಸ ವಿಚಾರ ಒಂದರಲ್ಲಿ ಕೊಹ್ಲಿ ಕೊಹ್ಲಿ ಎಂದು ಕೂಗುತ್ತಿದ್ದ ಅಭಿಮಾನಿಗಳ ಕಡೆಗೆ ಗೌತಮ್​ ಗಂಭೀರ್​ ಅಸಹ್ಯಕರ ಸನ್ನೆಯನ್ನು ತೋರಿಸಿರುವ ಘಟನೆ ನಡೆದಿದೆ. ಶ್ರೀಲಂಕಾದ ಪಲ್ಲೀಕಲೆ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
Here BJP MP Gautam Gambhir is showing middle finger to Padma Shri Virat Kohli.What’s wrong with BJP? Why is he abusing the pride of India?pic.twitter.com/buI0jq9WJu
ಇದನ್ನೂ ಓದಿ:ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ನ್ಯಾಯಾಲಯದಲ್ಲಿ ತಮಿಳುನಾಡು ಸಿಎಂ ಸ್ಟಾಲಿನ್​, ಉದಯನಿಧಿ ವಿರುದ್ಧ ದೂರು ದಾಖಲು
ವೈರಲ್​ ಆಗಿರುವ ವಿಡಿಯೋದಲ್ಲಿ ಫೋನಿನಲ್ಲಿ ಮಾತನಾಡುತ್ತ ತೆರಳುತ್ತಿರುವ ವೇಳೆ ಅಭಿಮಾನಿಗಳು ಕೊಹ್ಲಿ ಕೊಹ್ಲಿ ಎಂದು ಗಂಭಿರ್​ರನ್ನು ಛೇಡಿಸುತ್ತಾರೆ. ಈ ವೇಳೆ ಇದನ್ನು ಕೇಳಿ ಸಿಟ್ಟಿಗೆದ್ದ ಗಂಭೀರ್​ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿ ತೆರಳುತ್ತಾರೆ. ಭಾರತ ಹಾಗೂ ನೇಪಾಳ ನಡುವಿನ ಪಂದ್ಯದ ವೇಳೆ ಘಟನೆ ನಡೆದಿದ್ದು, ಗಂಭೀರ್​ ನಡೆಗೆ ಸಾಕಷ್ಟು ಖಂಡನೆ ವ್ಯಕ್ತವಾಗಿದೆ.
ಇತ್ತ ಗಂಭೀರ್​ ನಡೆ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದು, ಒಬ್ಬ ಮಾಜಿ ಕ್ರಿಕೆಟಿಗ, ಜನಪ್ರತಿನಿಧಿಯಾಗಿ ಇನ್ನೊಬ್ಬರ ಹೆಸರು ಹೇಳುತ್ತಿದ್ದಂತೆ ಅಸಹ್ಯಕರವಾಗಿ ನಡೆದುಕೊಂಡಿರುವುದು ಸರಿಯಲ್ಲ. ಒಂದು ವೇಳೆ ನಿಮ್ಮ ಜಾಗದಲ್ಲಿ ಬೇರೆ ಯಾರೇ ಇದ್ದರು ಹಾಗೆ ಮಾಡುತ್ತಿರಲಿಲ್ಲ. ವಿಶ್ವದಾದ್ಯಂತ ಕೊಹ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರನ್ನು ಕಂಡರೆ ಗೌತಮ್​ ಗಂಭಿರ್ ಏಕೆ ಹೀಗೆ ಆಡುತ್ತಾರೆ ಎಂಬುದು ತಿಳಿದಿಲ್ಲ ಎಂದು ಹಲವರು ಕಮೆಂಟ್​ ಮಾಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 + 20 =
Remember me
