ನವದೆಹಲಿ:ಬಹುನಿರೀಕ್ಷಿತ 18ನೇ ಲೋಕಸಭಾ ಚುನಾವಣೆಯು ಒಟ್ಟು 543 ಸ್ಥಾನಗಳಿಗೆ 7 ಹಂತಗಳಲ್ಲಿ ನಡೆಯಲಿದೆ. ಏಪ್ರಿಲ್​ 19 ರಂದು ಮತದಾನ ಆರಂಭವಾಗಲಿದ್ದು ಜೂನ್​ 4ಕ್ಕೆ ಫಲಿತಾಂಶ ಹೊರ ಬೀಳಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಲ್ಲಿ ಇರಲಿದೆ.
ಮಧ್ಯಾಹ್ನ 3 ಗಂಟೆಗೆ ರಾಷ್ಟ್ರ ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್​ ಕುಮಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸಲಾಯಿತು.
Lok Sabha elections to be held in 7 phases from 19th April to 1st June; Counting of votes on 4th Junepic.twitter.com/TO6cfHUp4g
— ANI (@ANI)March 16, 2024

ಏಳು ಹಂತಗಳ ದಿನಾಂಕ* ಮೊದಲ ಹಂತ: ಏಪ್ರಿಲ್​​ 19* ಎರಡನೇ ಹಂತ: ಏಪ್ರಿಲ್​ 26* ಮೂರನೇ ಹಂತ: ಮೇ 7* ನಾಲ್ಕನೇ ಹಂತ: ಮೇ 13* ಐದನೇ ಹಂತ: ಮೇ 5* ಆರನೇ ಹಂತ: ಮೇ 25* ಏಳನೇ ಹಂತ: ಜೂನ್​ 1
ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ. ರಾಷ್ಟ್ರಕ್ಕೆ ನಿಜವಾದ ಹಬ್ಬ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ನಾವು ಬದ್ಧರಾಗಿದ್ದೇವೆ. 17ನೇ ಲೋಕಸಭೆಯ ಅವಧಿಯು 2024ರ ಜೂನ್​ 16ರಂದು ಮುಕ್ತಾಯಗೊಳ್ಳಲಿದೆ ಎಂದು ರಾಜೀವ್​ ಕುಮಾರ್ ಹೇಳಿದರು.
97 ಕೋಟಿ ಮತದಾರರುದೇಶದಲ್ಲಿ 97 ಕೋಟಿ ನೋಂದಾಯಿತ ಮತದಾರರಿದ್ದಾರೆ. ಇವರಲ್ಲಿ 49.70 ಕೋಟಿ ಪುರುಷ ಮತದಾರರು ಹಾಗೂ 47.10 ಕೋಟಿ ಮಹಿಳಾ ಮತದಾರರಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರ ಅನುಪಾತವು ಪುರುಷರ ಮತದಾರರಿಗಿಂತ ಹೆಚ್ಚಾಗಿದೆ. 1.8 ಕೋಟಿ ಮಂದಿ ಮೊದಲ ಬಾರಿಗೆ ಮತ ಚಲಾಯಿಸುವವರಿದ್ದಾರೆ ಮತ್ತು 20-29 ವರ್ಷದೊಳಗಿನ 19.47 ಕೋಟಿ ಮತದಾರರಿದ್ದಾರೆ. 2.18 ಲಕ್ಷ ಶತಾಯುಷಿಗಳು ಮತ ಚಲಾಯಿಸಲಿದ್ದಾರೆ ಮತ್ತು 48 ಸಾವಿರ ತೃತೀಯಲಿಂಗಿ ಮತದಾರರಿದ್ದಾರೆ.
55 ಲಕ್ಷ ಇವಿಎಂಗಳುಚುನಾವಣೆಗಾಗಿ 10.5 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು, 1.5 ಕೋಟಿ ಮತಗಟ್ಟೆ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. 55 ಲಕ್ಷ ಮತಯಂತ್ರ (ಇವಿಎಂ) ಗಳು, 4 ಲಕ್ಷ ವಾಹನಗಳ ವ್ಯವಸ್ಥೆ ಮಾಡಲಾಗುತ್ತದೆ ಎಂದು ರಾಜೀವ್​ ಕುಮಾರ್​ ತಿಳಿಸಿದರು.
85 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೆ ಮತದಾನ ವ್ಯವಸ್ಥೆಮತಗಟ್ಟೆಗಳಲ್ಲಿ ಹೆಲ್ಪ್​ ಡೆಸ್ಕ್​ ಮತ್ತು ವ್ಹೀಲ್​ಚೇರ್​ ವ್ಯವಸ್ಥೆಯನ್ನು ಮಾಡಲಾಗುವುದು. 80 ವರ್ಷ ಮೇಲ್ಪಟ್ಟ ಮತದಾರರನ್ನು ಕರೆತರುವ ವ್ಯವಸ್ಥೆ ಮಾಡಲಾಗುವುದು. ಮತಗಟ್ಟೆಗಳಲ್ಲಿ ಶೌಚಾಲಯ ವ್ಯವಸ್ಥೆಯನ್ನು ಸಹ ಮಾಡಲಾಗುವುದು. 85 ವರ್ಷ ಮೇಲ್ಪಟ್ಟವರು ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು. ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್​ ಕೇಸ್​ ಇದ್ದರೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ತಪಾಸಣೆಗಾಗಿ ಚೆಕ್​ಪೋಸ್ಟ್​ಗಳನ್ನು ನಿರ್ಮಾಣ ಮಾಡಲಾಗುತ್ತದೆ. ಗಡಿಭಾಗಗಳಲ್ಲಿ ಡ್ರೋನ್​ ಮೂಲಕ ಪರೀಶಿಲನೆ ನಡೆಸಲಾಗುತ್ತದೆ.
ದ್ವೇಷ ಭಾಷಣವನ್ನು ಮಾಡುವಂತಿಲ್ಲಚುನಾವಣೆಗೆ ಆಮಿಷ ಒಡ್ಡುವಂತಿಲ್ಲ. ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ. ಸೂಕ್ಷ್ಮ ಮತಗಟ್ಟೆಗಳ ಮೇಲೆ ಹದ್ದಿನ ಕಣ್ಣಿಡಲಾಗುತ್ತದೆ. 2100 ವೀಕ್ಷಕರನ್ನು ನೇಮಕ ಮಾಡಲಾಗುತ್ತದೆ. ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗುತ್ತದೆ. ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಬೇಕು. ರಾಜಕೀಯ ನಾಯಕರು ಯಾವುದೇ ದ್ವೇಷ ಭಾಷಣವನ್ನು ಮಾಡುವಂತಿಲ್ಲ. ಅಭ್ಯರ್ಥಿಗಳು ಮತದಾರರನ್ನು ಪ್ರಚೋದಿಸುವಂತಿಲ್ಲ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 52 ಸ್ಥಾನಗಳಿಗೆ ಕುಸಿಯಿತು. ಲೋಕಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನವನ್ನು ಪಡೆಯಲು ಬೇಕಾದ ಸಂಖ್ಯೆಯು ಸಹ ಕಾಂಗ್ರೆಸ್​ಗೆ ಸಿಗಲಿಲ್ಲ.
ಲೋಕಸಭಾ ಚುನಾವಣೆ 2024: ಕರ್ನಾಟಕದಲ್ಲಿ ಏಪ್ರಿಲ್ 26, ಮೇ 7ರಂದು 2 ಹಂತದಲ್ಲಿ ಮತದಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
