ಲಖನೌ:ಕೇಳಿದ ತಕ್ಷಣ ಚಹಾ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದ ಮಾಡಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ ಜಿಲ್ಲೆಯ ಭೋಜ್‌ಪುರ್​ ಎಂಬ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಸುಂದರಿ (50) ಎಂದು ಗುರತಿಸಲಾಗಿದ್ದು, ಈಕೆಯ ಪತಿ ಧರಮ್​ವೀರ್​ (52)ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ:ಐದು ಟ್ರೋಪಿಗಳನ್ನು ಗೆದ್ದು ಕೊಟ್ಟಿರುವ ನನಗೆ ಅಗೌರವವಾಗಿದೆ; ಅಸಮಾಧಾನ ಹೊರಹಾಕಿದ ಹಿಟ್​ಮ್ಯಾನ್
ಈ ಕುರಿತು ಪ್ರತಿಕ್ರಿಯಿಸಿರುವ ಗಾಜಿಯಾಬಾದ್‌ ವಿಭಾಗದ ಎಸಿಪಿ ಜ್ಞಾನ್ ಪ್ರಕಾಶ್ ರೈ, ಬುಧವಾರ ಬೆಳಗ್ಗೆ ಸುಂದರಿ ಹಾಗೂ ಧರಮ್​ವೀರ್​ ನಡುವೆ ಚಹಾ ಮಾಡುವ ವಿಚಾರವಾಗಿ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆರೋಪಿ ತನ್ನ ಪತ್ನಿಯ ಶಿರಚ್ಛೇದ ಮಾಡಿದ್ದಾನೆ. ಘಟನೆ ನಡೆದ ವೇಳೆ ದಂಪತಿಯ ನಾಲ್ವರು ಮಕ್ಕಳು ಬೇರೊಂದು ಕೋಣೆಯಲ್ಲಿ ಮಲಗಿದ್ದರು ಎಂದು ತಿಳಿದು ಬಂದಿದೆ.
ಸುಂದರಿಯ ಕಿರುಚಾಟವನ್ನು ಕೇಳಿದ ಮಕ್ಕಳು ಹಾಗೂ ನೆರೆಹೊರೆಯವರು ಆಕೆಯ ನೆರವಿಗೆ ಧಾವಿಸುವಷ್ಟರಲ್ಲೇ ಆರೋಪಿ ಶಿರಚ್ಚೇದ ಮಾಡಿದ್ದಾನೆ. ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯನ್ನು ಹಿಡಿದ ಗ್ರಾಮಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಆತನನ್ನು ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಎಸಿಪಿ ಜ್ಞಾನ್ ಪ್ರಕಾಶ್ ರೈ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + twelve =
Remember me
