ಗಾಜಿಯಾಬಾದ್:ರೆಸ್ಟೋರೆಂಟ್ ಸಿಬ್ಬಂದಿಯೊಬ್ಬ ಆಹಾರ ಪ್ಯಾಕಿಂಗ್​ ಮಾಡುವ ವೇಳೆ ಉಗುಳಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆರೋಪಿಯ ಈ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಇದನ್ನೂ ಓದಿ:ಕುಸ್ತಿಪಟುಗಳ ಪರ ದನಿ ಎತ್ತಿದ ಬಾಬಾ ರಾಮದೇವ್; ಬ್ರಿಜ್​​ಭೂಷಣ್​ ಶರಣ್ ಸಿಂಗ್ ಬಂಧನಕ್ಕೆ ಆಗ್ರಹ
ಆರೋಪಿಯನ್ನು ಮಾಸೂಮ್ ಎಂದು ಗುರುತಿಸಲಾಗಿದ್ದು, ಉತ್ತರ ಪ್ರದೇಶದ ಗಾಜಿಯಾಬಾದ್‌ನ ಲೋನಿ ಪ್ರದೇಶದಲ್ಲಿ ಸಲಾಮ್ ಚಿಕನ್ ಎಂಬ ರೆಸ್ಟೋರೆಂಟ್​​ನಲ್ಲಿ ಕೆಲಸ ಮಾಡುತ್ತಿದ್ದ. ಉದ್ದೇಶಪೂರ್ವಕವಾಗಿ ಆಹಾರದ ಪೊಟ್ಟಣಗಳಲ್ಲಿ ಉಗುಳುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು, ಕೇವಲ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಈತ ಉಗುಳುತ್ತಿದ್ದ ಎಂಬ ಆರೋಪಗಳು ಕೇಳಿ ಬಂದಿವೆ.
ವಿಡಿಯೋವನ್ನು ಆಧರಿಸಿ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು, ರೆಸ್ಟೋರೆಂಟ್ ಉದ್ಯೋಗಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − seven =
Remember me
