ಬೆಂಗಳೂರು:ಗಿಲ್ಲಿ ಸಿನಿಮಾ ಮೂಲಕವಾಗಿ ಸ್ಯಾಂಡಲ್​ವುಡ್​​ಗೆ ಎಂಟ್ರಿಕೊಟ್ಟಿದ್ದ ನಟಿ ರಾಕುಲ್​​ ಪ್ರೀತಿ ಸಿಂಗ್​​ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಅದ್ಧೂರಿಯಾಗಿ ನಡೆಯಲಿರುವ ಈ ಮದುವೆಗೆ ದಿನಾಂಕವನ್ನು ನಿಗಧಿ ಮಾಡಲಾಗಿದೆ.
ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ರಾಕುಲ್ ಪ್ರೀತ್ ಸಿಂಗ್ ಮತ್ತು ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಈ ವರ್ಷ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಮುದ್ದಾದ ಜೋಡಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಬಾಲಿವುಡ್ ನ ಖ್ಯಾತ ನಟ ಹಾಗೂ ನಿರ್ಮಾಪಕ ಜಾಕಿ ಭಗ್ನಾನಿ ಅವರನ್ನು ರಾಕುಲ್ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು.ತಮ್ಮ ಪ್ರೇಮ ವಿಚಾರವನ್ನು ಈಗಾಗಲೇ ಸಾರ್ವಜನಿಕವಾಗಿ ಘೋಷಿಸಿರುವ ರಾಕುಲ್, ಸಿನಿಮಾ ಪಾರ್ಟಿಗಳು, ಸಮಾರಂಭಗಳು ಮತ್ತು ಫಂಕ್ಷನ್‌ಗಳಲ್ಲಿ ಜಾಕಿ ಜತೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.ಆದರೆ ಈ ಸೆಲೆಬ್ರಿಟಿ ಜೋಡಿ ಶೀಘ್ರದಲ್ಲೇ ತಮ್ಮ ಸಂಬಂಧವನ್ನು ಮತ್ತಷ್ಟು ಕೊಂಡೊಯ್ಯಲು ಮುಂದಾಗಿದ್ದಾರೆ.

ಮಾಧ್ಯಮಗಳ ಪ್ರಕಾರ, ರಾಕುಲ್-ಜಾಕಿ ಭಗ್ನಾನಿ ಮದುವೆ ಇದೇ ಫೆಬ್ರವರಿ 22 ರಂದು ಗೋವಾದ ಪ್ರಸಿದ್ಧ ರೆಸಾರ್ಟ್‌ನಲ್ಲಿ ನಡೆಯಲಿದೆ.ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ರಾಕುಲ್ ಮತ್ತು ಜಾಕಿ ಈ ವಿವಾಹ ಸಮಾರಂಭವನ್ನು ಯೋಜಿಸುತ್ತಿದ್ದಾರೆ.

ನಟಿ ರಾಕುಲ್ ಪ್ರೀತ್ ಸಿಂಗ್ ಮತ್ತು ನಟ, ನಿರ್ಮಾಕಪ ಜಾಕಿ ಭಗ್ನಾನಿ ಅಕ್ಟೋಬರ್ 2021 ರಲ್ಲಿ ಇಬ್ಬರ ಸಂಬಂಧವನ್ನು ಅಧಿಕೃತವಾಗಿ ಘೋಷಿಸಿದ್ದರು. ರಾಕುಲ್ ಪ್ರೀತ್ ಸಿಂಗ್ ಅವರ ಜನ್ಮದಿನದಂದು, ಜಾಕಿ ಭಗ್ನಾನಿ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಪ್ರೀತಿಯ ಗೆಳತಿಯೊಂದಿಗಿನ ರೋಮ್ಯಾಂಟಿಕ್ ಫೋಟೋವನ್ನು ಹಂಚಿಕೊಂಡಿದ್ದರು.

ಸದ್ಯ ರಾಕುಲ್ ಅವರು ಬಾಯ್‌ಫ್ರೆಂಡ್ ಜಾಕಿ ಜೊತೆ ವಿದೇಶದಲ್ಲಿದ್ದಾರೆ ಎನ್ನಲಾಗುತ್ತಿದೆ. ಹೊಸ ವರ್ಷದ ಆಚರಣೆಯ ಸಂಭ್ರಮದಲ್ಲಿದ್ದಾರೆ. ಕನ್ನಡದ ‘ಗಿಲ್ಲಿ’ ಚಿತ್ರದ ಮೂಲಕ ನಟನೆಗೆ ಎಂಟ್ರಿ ಕೊಟ್ಟ ರಾಕುಲ್ ಅವರು ಸೌತ್ ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:13 − two =
Remember me
