ಶ್ರೀನಗರ:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ನಾಯಕ ಗುಲಾಂ ನಬಿ ಆಜಾದ್ ಅವರು ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಶ್ರೀರಾಮನವಮಿ ಆಚರಿಸಿ ಹೋಗುತ್ತಿದ್ದವರನ್ನ ಅಡ್ಡಗಟ್ಟಿ ಅನ್ಯಕೋಮಿನ ಯುವಕರಿಂದ ಬೆದರಿಕೆ!
ಏಪ್ರಿಲ್ 2 ರಂದು, ಆಜಾದ್ ಅನಂತನಾಗ್-ರಾಜೌರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಡಿಪಿಎಪಿ ಘೋಷಣೆ ಮಾಡಿತ್ತು. ಅನಂತನಾಗ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೀನ್​ ಭಟ್, ಗುಲಾಂ ನಬಿ ಆಜಾದ್ ಅವರು (ಅನಂತನಾಗ್-ರಾಜೌರಿ ಕ್ಷೇತ್ರದಿಂದ) ಈ ಬಾರಿ ಸ್ಪರ್ಧಿಸುತ್ತಿಲ್ಲ ಎಂದು ಅಧಿಕೃತವಾಗಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮಿಯಾನ್ ಅಲ್ತಾಫ್ ಈಗ ಅನಂತನಾಗ್-ರಜೌರಿ ಕ್ಷೇತ್ರದಲ್ಲಿ ಮುಖಾಮುಖಿಯಾಗಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಮಾತನಾಡಿ, ಗುಲಾಂ ನಬಿ ಆಜಾದ್​ ಲೋಕಸಭೆ ಚುನಾವಣೆಯಿಂದ ಸ್ಪರ್ಧೆ ಮಾಡದಿರುವುದರ ಬಗ್ಗೆ ಕಿಡಿಕಾರಿದ್ದು, ಇದು ಬಿಜೆಪಿ ಅವರ ಸ್ಕ್ರಿಪ್ಟ್ ಎಂದು ವಾಗ್ದಾಳಿ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಒಂದೇ ಲೋಕಸಭಾ ಕ್ಷೇತ್ರವನ್ನು ಹೊಂದಿರುವ ಲಡಾಖ್‌ನಲ್ಲಿ ಮೇ 20 ರಂದು ಚುನಾವಣೆ ನಡೆಯಲಿದೆ.
ಛತ್ತೀಸ್‌ಗಢದಲ್ಲಿ 29 ನಕ್ಸಲೀಯರ ಎನ್‌ಕೌಂಟರ್​: ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್‌ ನಾಯಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
