ಇಟಲಿ:ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾದ ಮೋದಿ ಅವರು ಅಧಿಕಾರವಹಿಸಿಕೊಂಡ ಬಳಿಕ ವಿದೇಶ ಪ್ರವಾಸದಲ್ಲಿ ಇಟಲಿಗೆ ತೆರಳಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ವಿಶ್ವದ ಬಹುತೇಕ ನಾಯಕರು ಜಿ-7 ಶೃಂಗಸಭೆಯಲ್ಲಿ ಭಾಗಿಯಾಗಿದ್ದರು. ಇಟಾಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಅಮೆರಿಕ ಅಧ್ಯಕ್ಷ ಜೋ ಬಿಡನ್, ಯುಎಇ ಅಧ್ಯಕ್ಷ ಮೊ.ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತು ಪೋಪ್ ಫ್ರಾನ್ಸಿಸ್ ಅವರು ಪ್ರಧಾನಿ ಮೋದಿಯವರನ್ನು ಅಪ್ಪಿಕೊಂಡು ಅಭಿನಂದಿಸಿದರು.
ಇದನ್ನು ಓದಿ:ಮೋದಿ ಸರ್ಕಾರ ಪತನವಾಗಲಿದೆ ಎಂದಿದ್ದೇಕೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಪ್ರಧಾನಿ ಮೋದಿಯವರೊಂದಿಗೆ ವಿಶೇಷ ಸೆಲ್ಫಿ ತೆಗೆದುಕೊಂಡಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಕಿರು ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಪೋಸ್ಟ್​​ ಮಾಡಲಾದ ವಿಡಿಯೋದಲ್ಲಿ ಮೆಲೋನಿ ಅವರು ಹಲೋ ಎಂದು ಹೇಳುತ್ತಿದ್ದಾರೆ. ಹಾಗೂ ಇಬ್ಬರು ನಾಯಕರು ನಗುವುದು ಮತ್ತು ತಮಾಷೆ ಮಾಡುವುದು ಕಂಡುಬರುತ್ತದೆ.
Hi friends, from#Melodipic.twitter.com/OslCnWlB86
— Giorgia Meloni (@GiorgiaMeloni)June 15, 2024

ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಮೋದಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿರುವುದು ಇದೇ ಮೊದಲೆನಲ್ಲ. ಕಳೆದ ವರ್ಷ ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಮತ್ತು ನಂತರ ದುಬೈನಲ್ಲಿ ನಡೆದ ಸಿಒಪಿ-28ನಲ್ಲಿ ಉಭಯ ನಾಯಕರ ಭೇಟಿಯ ಸಮಯದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು.ಉಭಯ ದೇಶಗಳು ದ್ವಿಪಕ್ಷೀಯ ರಕ್ಷಣೆ ಮತ್ತು ಭದ್ರತಾ ಸಹಕಾರದ ಕುರಿತು ಚರ್ಚಿಸಿದರು. ರಕ್ಷಣಾ ಕೈಗಾರಿಕಾ ಸಹಕಾರವನ್ನು ಇನ್ನಷ್ಟು ಹೆಚ್ಚಿಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. (ಏಜೆನ್ಸೀಸ್​)
ಇಬ್ಬರು ಮಾಜಿ ಮುಖ್ಯಮಂತ್ರಿಗಳಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
