ನಾಗರಕರ್ನೂಲ್:16 ವರ್ಷದ ಬಾಲಕಿಯೊಬ್ಬಳು ತನ್ನ ಕುಟುಂಬವನ್ನು ಪೋಷಿಸಲು ಸಾಧ್ಯವಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಾಗರ್ ಕರ್ನೂಲ್ ಜಿಲ್ಲೆಯ ಬಿಜನಪಲ್ಲಿ ಮಂಡಲದ ಖಾನಾಪುರದಲ್ಲಿ ನಡೆದಿದೆ.
ಇದನ್ನೂ ಓದಿ:ಏಲಿಯನ್‌ನಂತೆ ಕಾಣುವ ವಿಚಿತ್ರ ಮಗುವಿಗೆ ಜನ್ಮ ನೀಡಿದ ಮಹಿಳೆ..
ಮೃತ ಬಾಲಕಿಯನ್ನು ಕಲ್ಪನಾ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ರಾಮದ ಸುಂಕರಿ ಬಾಲಸ್ವಾಮಿ ಮತ್ತು ಯಾದಮ್ಮ ದಂಪತಿಗಳಿಗೆ ಕಲ್ಪನಾ ಮತ್ತು ಚಂದನಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದು, ನಾಲ್ಕು ವರ್ಷಗಳ ಹಿಂದೆ ಯಾದಮ್ಮ ಯಾರಿಗೂ ಹೇಳದೆ ಮನೆ ಬಿಟ್ಟು ಹೋಗಿದ್ದಾಳೆ. ಅಂದಿನಿಂದ ತಂದೆ ಬಾಲಸ್ವಾಮಿ ತನ್ನ ಇಬ್ಬರು ಹೆಣ್ಣು ಮಕ್ಕಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತಿದ್ದನು.
ಆದರೆ ನಾಲ್ಕು ತಿಂಗಳ ಹಿಂದೆ ಕೆಲಸಕ್ಕೆ ಹೋಗಿದ್ದ ಬಾಲಸ್ವಾಮಿ ಪೈನ್ ಮರದಿಂದ ಬಿದ್ದು ಹಾಸಿಗೆ ಹಿಡಿದಿದ್ದಾನೆ. ಬಳಿಕ ಹಿರಿಯ ಮಗಳು ಕಲ್ಪನಾ ಹತ್ತನೇ ತರಗತಿ ಮುಗಿಸಿದ್ದು, ಕುಟುಂಬ ನಿರ್ವಹಣೆಯ ಹೊಣೆ ಹೊತ್ತು ಕೂಲಿ ಕೆಲಸಕ್ಕೆ ಹೋಗುತ್ತಿದ್ದಳು. ತಂಗಿ ಚಂದನಾ ಇನ್ನು ಶಾಲೆಯಲ್ಲಿ ಓದುತ್ತಿದ್ದಾಳೆ. ಏನಾಯ್ತು ಏನೊ ಕಲ್ಪನಾ ಇಂದು ಬೆಳಿಗ್ಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡಿದ್ದಾಳೆ.
ಇದನ್ನೂ ಓದಿ:‘ಒಳ್ಳೆಯ ಬ್ಯಾಂಕ್, ಒಂದು ರೂಪಾಯಿಯೂ ಸಿಗಲಿಲ್ಲ’ ಎಂದು ನೋಟ್​ ಬರೆದಿಟ್ಟ ಕಳ್ಳ..
ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಆಕೆ ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಈ ಮಧ್ಯೆ ಅಕ್ಕನ ಸಾವಿನಿಂದ ಆಘಾತಕ್ಕೊಳಗಾಗಿರುವ ತಂಗಿಯ ಆರೋಗ್ಯ ಸ್ಥಿತಿ ಹದಗೆಟ್ಟಿದೆ.(ಏಜೆನ್ಸೀಸ್)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 4 =
Remember me
