ಭೋಪಾಲ್​/ನವದೆಹಲಿ:ಅತ್ಯಾಚಾರ ಸಂತ್ರಸ್ತೆ ಕಡೆಗಿನ ಸೂಕ್ಷ್ಮತೆಯನ್ನು ಮರೆತಂತಹ ಹಾಗೂ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಬುಡಕಟ್ಟು ಜನಾಂಗ ಪ್ರಾಬಲ್ಯವಿರುವ ಗ್ರಾಮದಲ್ಲಿ ಅತ್ಯಾಚಾರಕ್ಕೆ ಒಳಗಾದ 16 ವರ್ಷದ ಹುಡುಗಿಯನ್ನು ಆರೋಪಿಯ ಜತೆ ಹಗ್ಗದಿಂದ ಕಟ್ಟಿಹಾಕಿ ಮೆರವಣಿಗೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮನಕದಡುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಸಹ ಆಗಿದ್ದು, ಈ ರೀತಿ ಮಾಡಿದವರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ವಿಡಿಯೋದಲ್ಲಿ ಸಂತ್ರಸ್ತ ಹುಡುಗಿಯನ್ನು ಹಗ್ಗದಲ್ಲಿ ಕಟ್ಟಿ ಆರೋಪಿ ಜತೆ ಮೆರವಣಿಗೆ ಕರೆದೊಯ್ಯುತ್ತಿದ್ದು, ಅವರ ಸುತ್ತ ಇರುವ ಕೆಲವು ವ್ಯಕ್ತಿಗಳು ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗುತ್ತಿದ್ದಾರೆ. ಇಬ್ಬರನ್ನು ಥಳಿಸಿದ ಬಳಿಕ ಮೆರವಣಿಗೆ ಮಾಡಿರುವುದು ಬೆಳಕಿಗೆ ಬಂದಿದೆ. ರಾಜಧಾನಿ ಭೋಪಾಲ್​ನಿಂದ 400 ಕಿ.ಮೀ ದೂರದಲ್ಲಿರುವ ಅಲಿರ್ಜ್​ಪುರದಲ್ಲಿ ಭಾನುವಾರ ಈ ಘಟನೆ ನಡೆದಿದೆ.
ಇದನ್ನೂ ಓದಿರಿ:ಬರ್ತ್​ ಡೇ ಸಂಭ್ರಮದಲ್ಲಿದ್ದ ನಾಲ್ವರು ದುರಂತ ಸಾವು, ಕೇಕ್​ ಕತ್ತರಿಸಿದ ದಿನವೇ ಅಟ್ಟಹಾಸ ಮೆರೆದ ಜವರಾಯ
ಅತ್ಯಾಚಾರ ಸಂತ್ರಸ್ತೆಯನ್ನು ಮುಜುಗರಕ್ಕೀಡು ಮಾಡಲು ಆರೋಪಿಯೊಂದಿಗೆ ನಡೆಯಲು ಒತ್ತಾಯಿಸಿದವರಲ್ಲಿ ಆಕೆಯ ಕುಟುಂಬದವರು ಸಹ ಸೇರಿದ್ದಾರೆಂದು ವರದಿಗಳು ತಿಳಿಸಿವೆ. ಇದು ಗಮನಕ್ಕೆ ಬಂದ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹುಡುಗಿಯನ್ನು ರಕ್ಷಿಸಿದರು.
ಸದ್ಯ ಘಟನಾ ಸಂಬಂಧ ಪ್ರಕರಣ ದಾಖಲಿಸಲಾಗಿದೆ. 21 ವರ್ಷದ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಸಂತ್ರಸ್ತೆಯ ಕುಟುಂಬದ ಸದಸ್ಯರ ವಿರುದ್ಧವೂ ಎಫ್​ಐಆರ್​ ದಾಖಲಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.(ಏಜೆನ್ಸೀಸ್​)
ಫೋನ್​ನಲ್ಲಿ ಬಾಡಿಗೆದಾರನ ಮಾತು ಕೇಳಿ ಆತನ ಮನೆಗೆ ಹೋದ ಮಾಲೀಕನಿಗೆ ಕಾದಿತ್ತು ಬಿಗ್​ ಶಾಕ್!​

ತನ್ನಿಬ್ಬರು ಮಕ್ಕಳು ಸೇರಿದಂತೆ ಇಡೀ ಕುಟುಂಬಕ್ಕೆ ವಿಷವುಣಿಸಿ ಪ್ರಿಯಕರನೊಂದಿಗೆ ಮಹಿಳೆ ಪರಾರಿ

ಎಲ್ಲರಿಗೂ ಒಂದೇ ನಿಯಮ: ಮಾಸ್ಕ್​ ಧರಿಸದ ಸರ್ಕಲ್​ ಇನ್ಸ್​ಪೆಕ್ಟರ್​ಗೆ ದಂಡ ವಿಧಿಸಿದ ಎಸ್​ಪಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 16 =
Remember me
