ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಟರ್ಮಿನಲ್​ನಲ್ಲೇ ಬಿಟ್ಟು ವಿಮಾನ ಟೇಕಾಫ್​ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಗೋ ಫಸ್ಟ್ ಏರ್ಲೈನ್ಸ್ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಈ ಘಟನೆ ಜ.9ರಂದು ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ರಾಜ್ಯ ರಾಜಧಾನಿ ಬೆಂಗಳೂರಿನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ G8 116 ನಂಬರ್​ನ ಗೋಫಸ್ಟ್ ವಿಮಾನ ಹೊರಟಿತ್ತು. ಮೊದಲನೇ ಟ್ರಿಪ್​​ನಲ್ಲಿ ವಿಮಾನಕ್ಕೆ‌ ಬಸ್​ನಲ್ಲಿ ಹೋಗಿ 50 ಜನ ಪ್ರಯಾಣಿಕರು ಹತ್ತಿದ್ದರು. ಎರಡನೇ ಟ್ರಿಪ್​​ನಲ್ಲಿ 54 ಜನರನ್ನು ಟರ್ಮಿನಲ್​​ನಿಂದ ವಿಮಾನದ ಬಳಿಗೆ ಬಸ್ ಕರೆದೊಯ್ಯಬೇಕಿತ್ತು. ಆದರೆ, ಬಸ್​ ಪ್ರಯಾಣಿಕರನ್ನು ಕರೆತರುವ ಮುನ್ನವೆ ವಿಮಾನ ಟೇಕಾಫ್​ ಆಗಿತ್ತು. ಪ್ರಯಾಣಿಕರನ್ನು ಗಮನಿಸದೆ ಏರ್​ಲೈನ್ಸ್​ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ ಅಂತ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿ, ಗೋಫಸ್ಟ್​ ಏರ್​ಲೈನ್ಸ್​ ವಿರುದ್ಧ ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಅಸಮಾಧಾನ ಹೊರ ಹಾಕಿದ್ದರು. ಸಾಮಾಜಿಕ ಜಾಲತಾಣದಲ್ಲೂ ಭಾರೀ ಟೀಕೆ ವ್ಯಕ್ತವಾಗಿತ್ತು.
@DGCAIndia@Officejmscindia@AmitShahOffice@official_Arnab_Go first G8 116 flight Blore-delhi, 54 passengers were left in the bus post final on-board, the flight took off with luggages and left 54 passengers at the airport, serious security branch. passenger's are struggling.pic.twitter.com/MhwG7vI7UZ
— Neeraj Bhat (@neerajbhat001)January 9, 2023

ಟ್ವಿಟರ್​ನಲ್ಲಿ ಗೋಫಸ್ಟ್ ಮತ್ತು ಡಿಜಿಸಿಎಗೆ 50 ಕ್ಕೂ ಅಧಿಕ‌ ಪ್ರಯಾಣಿಕರು ಟ್ವೀಟ್​ ಮಾಡಿ ಸಮಯಕ್ಕೆ ಸರಿಯಾಗಿ ಹೋಗಲು ಆಗಿಲ್ಲ ಅಂತ ಬೇಸರ ಹೊರಹಾಕಿದ್ದರು. ಇದಾದ ಬಳಿಕ ಗೋಫಸ್ಟ್​ ಸಂಸ್ಥೆಗೆ ಡಿಜಿಸಿಎ ಶೋಕಾಸ್​ ನೋಟಿಸ್​ ನೀಡಿ, ಕಾರಣ ತಿಳಿಸುವಂತೆ ಹೇಳಿತ್ತು. ಅಲ್ಲದೆ, ತಮ್ಮ ನಿಯಂತ್ರಕ ಕಟ್ಟುಪಾಡುಗಳ ಲೋಪಕ್ಕಾಗಿ ವಿಮಾನಯಾನ ಸಂಸ್ಥೆಯ ವಿರುದ್ಧ ಏಕೆ ಜಾರಿ ಕ್ರಮ ತೆಗೆದುಕೊಳ್ಳಬಾರದು ಎಂದು ಕೇಳಿತ್ತು.
ಇದಕ್ಕೆ ಜನವರಿ 25ರಂದು ಗೋಫಸ್ಟ್​ ಏರ್​ಲೈನ್​ ಸಂಸ್ಥೆ ಉತ್ತರ ನೀಡಿತ್ತು. ವಾಣಿಜ್ಯ ಸಿಬ್ಬಂದಿ ಮತ್ತು ಸಿಬ್ಬಂದಿ ನಡುವೆ ವಿಮಾನದಲ್ಲಿ ಪ್ರಯಾಣಿಕರನ್ನು ಹತ್ತುವುದಕ್ಕೆ ಸಂಬಂಧಿಸಿದಂತೆ ಅಸಮರ್ಪಕ ಸಂವಹನ ಮತ್ತು ಸಮನ್ವಯದ ಕೊರತೆಯಿಂದ ತಪ್ಪು ನಡೆದಿದೆ ಎಂದು ಹೇಳಿತ್ತು. ಆದರೆ, ಈ ಉತ್ತರ ಡಿಜಿಸಿಎಗೆ ಸಮಾಧಾನ ನೀಡದಿದ್ದರಿಂದ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.(ಏಜೆನ್ಸೀಸ್​)
54 ಪ್ರಯಾಣಿಕರನ್ನು ಟರ್ಮಿನಲ್​ನಲ್ಲೇ ಬಿಟ್ಟು ಟೇಕಾಫ್​ ಆದ ವಿಮಾನ; ಎಡವಟ್ಟು ಮಾಡಿಕೊಂಡಿದ್ದ ಸಿಬ್ಬಂದಿ ಅಮಾನತು

ಮಕ್ಕಳಿಬ್ಬರನ್ನು ಕೊಂದು ಪತ್ನಿಯೊಂದಿಗೆ ಸಾವಿನ ಶರಣಾದ ಬಿಜೆಪಿ ನಾಯಕ: ಟ್ವೀಟ್​ನಲ್ಲಿತ್ತು ಸಾವಿನ ರಹಸ್ಯ

ನರೇಶ್​-ಪವಿತ್ರಾ ಲೋಕೇಶ್​ ಪ್ರಕರಣದಲ್ಲಿ ಸ್ಫೋಟಕ ಟ್ವಿಸ್ಟ್​: 3ನೇ ಪತ್ನಿ ವಿರುದ್ಧ ಗಂಭೀರ ಆರೋಪ ಮಾಡಿದ ನರೇಶ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 5 =
Remember me
