ನವದೆಹಲಿ:ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹತ್ಯೆ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ಅವರು ಬಿಜೆಪಿ ಮತ್ತು ಪಶ್ಚಿಮ ಬಂಗಾಳ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡು, ನ್ಯಾಯಾಲಯವನ್ನು ನಿಮ್ಮ ನಿಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದೀರಾ ಎಂದು ಎಚ್ಚರಿಸಿದರು.
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ವಕ್ತಾರ ಗೌರವ್​ ಬನ್ಸಾಲ್​ ಅವರು ಸುಪ್ರೀಂಕೋರ್ಟ್​ನಲ್ಲಿ ದಾವೆ ಹೂಡಿದ್ದರು. ಈ ಕುರಿತು ಬಿಜೆಪಿ ಪರ ಹಿರಿಯ ವಕೀಲ ಗೌರವ್​ ಭಾಟಿಯಾ ಹಾಗೂ ತೃಣಮೂಲ ಕಾಂಗ್ರೆಸ್​ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಪರ ಹಿರಿಯ ವಕೀಲ ಹಾಗೂ ಕಾಂಗ್ರೆಸ್​ ಮುಖಂಡ ಕಪಿಲ್​ ಸಿಬಲ್​ ಸೋಮವಾರ ವಾದ ಮಂಡಿಸಿದರು.
ಅರ್ಜಿಗೆ ವಿರೋಧ ವ್ಯಕ್ತಪಡಿಸಿದ ಕಪಿಲ್​ ಸಿಬಲ್​, ರಾಜಕೀಯ ಪಕ್ಷವೊಂದಕ್ಕೆ ಪಿಐಎಲ್​ ಸಲ್ಲಿಸಲು ಖಂಡಿತವಾಗಿ ಅವಕಾಶ ಮಾಡಿಕೊಡಬೇಕೆ ಎಂಬುದನ್ನು ಪರೀಶಿಲಿಸಬೇಕೆಂದು ಮನವಿ ಮಾಡಿಕೊಂಡರು.
ಈ ವೇಳೆ ಮಧ್ಯ ಪ್ರವೇಶಿಸಿದ ಮುಖ್ಯ ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ, ಎರಡು ಕಡೆಯ ಎದುರಾಳಿಗಳು ನ್ಯಾಯಾಲಯದ ವೇದಿಕೆಯನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬುದು ನಮಗೆ ತಿಳಿದಿದೆ ಎಂದು ಕೋರ್ಟ್​​ ಆವರಣದಲ್ಲಿ ರಾಜಕೀಯ ಹೇಳಿಕೆ ನೀಡಿದ್ದಕ್ಕೆ ಸಿಜೆಐ ಗರಂ ಆದರು.
ಮುಂದುವರಿದು ಮಾತನಾಡಿದ ಅವರು ನಿಮ್ಮ ರಾಜಕೀಯ ಲಾಭವನ್ನು ಪಡೆಯಲು ನೀವಿಬ್ಬರೂ ಟಿವಿ ಚಾನೆಲ್​ಗೆ ಹೋಗುವುದು ಒಳಿತೆಂದು ಹೇಳಿದರು.
ಇದೇ ವೇಳೆ ಮೃತ ಬಿಜೆಪಿ ಕಾರ್ಯಕರ್ತ ದುಲಾಲ್​ ಕುಮಾರ್​ ಕುಟುಂಬ ಸಿಬಿಐ ತನಿಖೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ನಾಲ್ಕು ವಾರದೊಳಗೆ ಪ್ರತಿಕ್ರಿಯಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚನೆ ನೀಡಿತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 6 =
Remember me
