ಗೋವಾ:ಅನೇಕ ವರ್ಷಗಳಿಂದ ಕಳಸಾ ಬಂಡೂರಿ ಯೋಜನೆಗಾಗಿ ರಾಜ್ಯದಲ್ಲಿ ಹೋರಾಟ ನಡೆಯುತ್ತಿತ್ತು. ಇತ್ತೀಚೆಗೆ ಹೋರಾಟದ ಫಲವಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗ ಸ್ವೀಕಾರ ಮಾಡಿತ್ತು.
ಈ ಬಗ್ಗೆ ಹೇಳಿಕೆ ನೀಡಿದ್ದ ಸಂಸದೀಯ ವ್ಯವಹಾರಗಳ ಸಚಿವ, ಪ್ರಹ್ಲಾದ್​ ಜೋಶಿ ‘ಇನ್ನು ಸುಲಭವಾಗಿ ಯೋಜನೆಗೆ ಚಾಲನೆ ಸಿಗಲಿದೆ’ ಎಂದಿದ್ದರು. ಆದರೆ ಈಗ ಗೋವಾ ಸರ್ಕಾರ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಗೆ ನೀರು ಎರಚಿದೆ.
ಇದೀಗ ಕರ್ನಾಟಕಕ್ಕೆ ಸೆಡ್ಡು ಹೊಡೆದಿರುವ ಗೋವಾ, ಮಹದಾಯಿ ವಿಚಾರವನ್ನು ಕೇಂದ್ರಕ್ಕೆ ಸರ್ವ ಪಕ್ಷಗಳ ಶಾಸಕಾಂಗ ಪಕ್ಷದ ನಿಯೋಗ ಒಯ್ಯಲು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದೆ.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್​ ಷಾ, ಜಲಶಕ್ತಿ ಸಚಿವ ಶೇಖಾವತ್ ಭೇಟಿಗೆ ಗೋವಾ ಮುಖ್ಯಮಂತ್ರಿ ಸಾವಂತ ನಿರ್ಧಾರ ಮಾಡಿದ್ದಾರೆ. ಇಂದು ಸಂಜೆಯೇ ಪಣಜಿಯಲ್ಲಿ ಸರ್ವ ಪಕ್ಷಗಳ ಸಭೆ ನಡೆದಿದೆ. ಮಹಾರಾಷ್ಟ್ರದ ಗಡಿ ಸವಾಲಿನ ನಂತರ, ನೀರಿಗಾಗಿ ಗೋವಾ ಕರ್ನಾಟಕಕ್ಕೆ ಅಡ್ಡಗಾಲು ಹಾಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
