ನವದೆಹಲಿ:ಇಂದು ನೂತನ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದನದ ಮೊದಲ ದಿನದಂದು ಮಹಿಳಾ ಮೀಸಲಾತಿ ಮಸೂದೆ ಮಂಡನೆ ಮಾಡಿದ್ದಾರೆ. ಇದನ್ನು ಜಾರಿಗೊಳಿಸಲು ಭಗವಂತ ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಈ ಚಿತ್ರದಲ್ಲಿ ಮೊದಲ ಬಾರಿಗೆ ಕೇಳಿಬರಲಿದೆ ಟ್ರಾನ್ಸ್‌ಜೆಂಡರ್ ಧ್ವನಿ; ಅವಕಾಶ ಸಿಕ್ಕಿದ್ಹೇಗೆ ಗೊತ್ತಾ?
ಪ್ರಸ್ತುತ ಮಹಿಳಾ ಮೀಸಲಾತಿ ಮಸೂದೆಯನ್ನು ‘ನಾರಿ ಶಕ್ತಿ ವಂದನ್ ಅಧಿನಿಯಂ’ ಎಂದು ಕರೆಯಲಾಗುತ್ತದೆ. ತಮ್ಮ ಭಾಷಣದಲ್ಲಿ ಮಹಿಳಾ ಕೋಟಾದ ಬಗ್ಗೆ ಮಾತನಾಡಿದ ಪ್ರಧಾನಿ, “ಇದನ್ನು ಜಾರಿಗೊಳಿಸಲು ದೇವರು ನನ್ನನ್ನು ಆಯ್ಕೆ ಮಾಡಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಹಲವಾರು ಬಾರಿ ಮಂಡಿಸಲಾಗಿತ್ತು. ಆದ್ರೆ, ಹಲವು ಬಾರಿ ಇದಕ್ಕೆ ತಡೆ ಎದುರಾಗಿತ್ತು” ಎಂದು ಹೇಳಿದರು.
ಇದನ್ನೂ ಓದಿ:ಸಂಪುಟದಿಂದ ಸಚಿವ ಸುಧಾಕರ್ ಅವರನ್ನು ಕೈಬಿಡಿ: ಚಿತ್ತಾಪುರದಲ್ಲಿ ಬ್ರಾಹ್ಮಣ ಸಮಾಜದಿಂದ ಹೋರಾಟ
“ಮಸೂದೆಯನ್ನು ಅಂಗೀಕರಿಸಲು ಸಾಕಷ್ಟು ಬಹುಮತ ಇರಲಿಲ್ಲ ಮತ್ತು ಹಲವು ಕಾರಣಗಳಿಂದ ಈ ಕನಸು ಅಪೂರ್ಣವಾಗಿತ್ತು. ಆದ್ರೆ, ಇಂದು ದೇವರೇ ಇದನ್ನು ಮುಂದಕ್ಕೆ ಕೊಂಡೊಯ್ಯಲು ನನಗೆ ಅವಕಾಶ ನೀಡಿದ್ದಾರೆ. ನಮ್ಮ ಸರ್ಕಾರ ಇಂದು ಉಭಯ ಸದನಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಕುರಿತು ಹೊಸ ಮಸೂದೆಯನ್ನು ತರುತ್ತಿದೆ” ಎಂದು ಹೊಸ ಸಂಸತ್​ನಲ್ಲಿ ಪ್ರಧಾನಿ ಮೋದಿ ಹೇಳಿದರು,(ಏಜೆನ್ಸೀಸ್).
VIDEO | ಬಂದೂಕು ತೋರಿಸಿ ಬೆದರಿಕೆ; ಇಬ್ಬರು ಯುವಕರ ಪುಂಡಾಟ ಸಿಸಿಟಿವಿಯಲ್ಲಿ ಸೆರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 13 =
Remember me
