ನವದೆಹಲಿ:ಕೇಂದ್ರ ಸರ್ಕಾರ ಹಿಂದಿಯನ್ನು ಹೇರುತ್ತಿದೆ, ಕನ್ನಡವನ್ನು ಕಡೆಗಣಿಸುತ್ತಿದೆ ಎಂಬ ಆರೋಪ-ಪ್ರತ್ಯಾರೋಪಗಳ ನಡುವೆ ಕೇಂದ್ರ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ಕನ್ನಡ ಭಾಷಾ ಅಭಿವೃದ್ಧಿಗಾಗಿ ಎಷ್ಟು ಅನುದಾನ ನೀಡಿದೆ ಎಂಬ ಮಾಹಿತಿ ಮುನ್ನೆಲೆಗೆ ಬಂದಿದೆ. ಇದೀಗ ಮತ್ತೊಂದು ಹಂತದ ಚರ್ಚೆಗೆ ಕಾರಣವಾಗುವ ಲಕ್ಷಣಗಳು ಗೋಚರಿಸಿವೆ.
ಕೇಂದ್ರ ಸರ್ಕಾರ ಕನ್ನಡ ಭಾಷಾ ಅಭಿವೃದ್ಧಿಗೆ ಅನುದಾನ ನೀಡುವಲ್ಲಿ ತಾರತಮ್ಯವೆಸಗಿದೆ ಎಂದು ರಾಜ್ಯಸಭಾ ಸದಸ್ಯ, ಕಾಂಗ್ರೆಸ್​​ನ ಜಿ.ಸಿ. ಚಂದ್ರಶೇಖರ್ ರಾಜ್ಯಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದಾರೆ. ಕನ್ನಡಕ್ಕೆ ಮಲತಾಯಿ ಧೋರಣೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಕೂಡಲೇ ಸರಿಪಡಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಬೇಕು ಎಂಬುದಾಗಿಯೂ ಅವರು ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಈತನ ಹುಟ್ಟೇ ಗಿನ್ನೆಸ್​ ವರ್ಲ್ಡ್​ ರೆಕಾರ್ಡ್​; ತಾಯಿ ಗರ್ಭದಿಂದ ಇವನಿಗಿಂತಲೂ ಬೇಗ ಬಂದು ಇನ್ನೂ ಬದುಕಿರುವವರೇ ಇಲ್ಲ!
ದೇಶದಲ್ಲಿ ಸಂಸ್ಕೃತ ಮಾತಾಡುವವರು ಕೇವಲ 28 ಸಾವಿರ ಮಂದಿಯಷ್ಟೇ ಇರುವುದು. ಅದಾಗ್ಯೂ ಸಂಸ್ಕೃತ ಭಾಷಾ ಅಭಿವೃದ್ಧಿಗೆ ಕೇಂದ್ರ ಸರ್ಕಾರ 640 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ 2 ಸಾವಿರ ವರ್ಷಕ್ಕೂ ಅಧಿಕ ಇತಿಹಾಸ ಇರುವ ಕನ್ನಡವನ್ನು 6.5 ಕೋಟಿ ಜನರು ಮಾತನಾಡುತ್ತಿದ್ದಾರೆ. ಅದಾಗ್ಯೂ ಕನ್ನಡಕ್ಕೆ ಕೇಂದ್ರ ಸರ್ಕಾರ 7 ವರ್ಷದಲ್ಲಿ ಕೊಟ್ಟಿರುವುದು 8.39 ಕೋಟಿ ಮಾತ್ರ. ಈ ಮೂಲಕ ಕೇಂದ್ರ ಸರ್ಕಾರ ಕನ್ನಡದ ಬಗ್ಗೆ ಮಲತಾಯಿ ಧೋರಣೆ ವ್ಯಕ್ತಪಡಿಸಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಜಗತ್ತಿನ 59 ದೇಶಗಳಲ್ಲಿ ಪತ್ತೆಯಾಗಿದೆ ಒಮಿಕ್ರಾನ್​; ಭಾರತದಲ್ಲಿ ಇದುವರೆಗಿನ ಪ್ರಕರಣ ಎಷ್ಟು ಗೊತ್ತೇ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 18 =
Remember me
