ಮುಂಬೈ:ಭಾರತದಲ್ಲಿ ಚಿನ್ನದ ವಹಿವಾಟು ಚುರುಕುಗೊಂಡಿದ್ದು, ಕಳೆದ ವರ್ಷದ ಆಗಸ್ಟ್​ಗೆ ಹೋಲಿಕೆ ಮಾಡಿದರೆ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಚಿನ್ನದ ಆಮದು ದುಪ್ಪಟ್ಟುಗೊಂಡಿದೆ. ಚಿನ್ನದ ಬೆಲೆಯೂ ಇಳಿಕೆಯಾಗಿದ್ದು, ಮುಂಬರುವ ಹಬ್ಬಗಳ ಸೀಸನ್ ಹಿನ್ನೆಲೆಯಲ್ಲಿ ಆಭರಣಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಭರಣ ತಯಾರಕರು ದೊಡ್ಡ ಪ್ರಮಾಣದಲ್ಲಿ ಚಿನ್ನವನ್ನು ಖರೀದಿ ಮಾಡುತ್ತಿದ್ದಾರೆ.
ಭಾರತದ ವಿಶ್ವದಲ್ಲೇ ಚಿನ್ನವನ್ನು ಅತಿಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುವ ಎರಡನೇ ರಾಷ್ಟ್ರವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಸಾರ್ವಕಾಲಿಕ ಗರಿಷ್ಠಮಟ್ಟದಿಂದ ಶೇ. 12 ಇಳಿಕೆ ದಾಖಲಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 2072 ಡಾಲರ್​ಗೆ ಮಾರಾಟವಾಗುತ್ತಿದೆ. ಭಾರತ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ 63 ಟನ್ ಚಿನ್ನವನ್ನು ಆಮದು ಮಾಡಿಕೊಂಡಿತ್ತು. ಆದರೆ ಈ ವರ್ಷದ ಆಗಸ್ಟ್​ನಲ್ಲಿ 121 ಟನ್ ಆಮದು ಮಾಡಿಕೊಂಡಿದೆ. ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಆಮದು ಮಾಡಿಕೊಳ್ಳುವ ಕಾರಣ ರುಪಾಯಿ ಮೌಲ್ಯದ ಮೇಲೂ ಪರಿಣಾಮ ಆಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಆಗಸ್ಟ್ ತಿಂಗಳ ಮಧ್ಯಭಾಗದಲ್ಲಿ ಚಿನ್ನ ಪ್ರತಿ 10 ಗ್ರಾಮ್​ (ಫ್ಯೂಚರ್ಸ್) 45,662 ರೂ.ಗೆ ಇಳಿಕೆಯಾಗಿತ್ತು. ಇದು ಕಳೆದ 10 ತಿಂಗಳ ಕನಿಷ್ಠ ಮಟ್ಟವಾಗಿತ್ತು. ಖರೀದಿದಾರರಿಗೆ ಇದು ಉತ್ತಮ ಅವಕಾಶ ಕಲ್ಪಿಸಿತ್ತು. ಮುಂಬರುವ ಹಬ್ಬಗಳ ಸೀಸನ್ ಹಿನ್ನೆಲೆಯಲ್ಲಿ ಆಭರಣ ತಯಾರಕರು ದೊಡ್ಡ ಪ್ರಮಾಣದಲ್ಲಿ ಚಿನ್ನ ಖರೀದಿ ಮಾಡಿದ್ದರು. ಕಳೆದ ವರ್ಷ ಕರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್​ಡೌನ್ ಘೋಷಣೆಯಾದ ಕಾರಣ ಚಿನ್ನದ ಬೇಡಿಕೆ ಕುಸಿತ ಕಂಡಿತ್ತು. ಜತೆಗೆ ಬೆಲೆಯಲ್ಲೂ ದಾಖಲೆಯ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಜನರು ಖರೀದಿಗೆ ಮುಂದಾಗಲಿಲ್ಲ. ಈಗ ಆರ್ಥಿಕ ಚಟುವಟಿಕೆ ಸ್ವಲ್ಪ ಸುಧಾರಿಸಿದ್ದು, ಆಭರಣ ಖರೀದಿ ಹೆಚ್ಚುವ ನಿರೀಕ್ಷೆ ಇದೆ.
ಚಿನ್ನ ಇಳಿಕೆ, ಬೆಳ್ಳಿ ಏರಿಕೆ:ಚಿನಿವಾರ ಪೇಟೆಯಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ 71 ರೂ. ಇಳಿಕೆ ಕಂಡಿದ್ದು, 46,503 ರೂ. ಆಗಿದೆ. ಚಿನ್ನ ಪ್ರತಿ ಕೆಜಿಗೆ 263 ರೂ. ಏರಿಕೆ ಕಂಡಿದ್ದು, 64,168 ರೂ. ತಲುಪಿದೆ.
ಸಾರ್ವಕಾಲಿಕ ಎತ್ತರಕ್ಕೆ ಷೇರುಪೇಟೆ:ಸೆನ್ಸೆಕ್ಸ್ 166 ಅಂಕ ಏರಿಕೆ ಕಂಡಿದ್ದು, ಭಾರತೀಯ ಷೇರು ಸೂಚ್ಯಂಕ ಸಾರ್ವಕಾಲಿಕ ಎತ್ತರಕ್ಕೆ ತಲುಪಿದೆ. ಸೆನ್ಸೆಕ್ಸ್ 58,296ಕ್ಕೆ ಏರಿಕೆಯಾಗಿದ್ದರೆ, ನಿಫ್ಟಿ 54 ಅಂಕ ಏರಿಕೆ ಕಂಡು 17,377.80ಕ್ಕೆ ಹೆಚ್ಚಳವಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್, ಇಸ್ಪೋಸಿಸ್, ಎಚ್​ಸಿಎಲ್ ಟೆಕ್, ಟೆಕ್ ಮಹಿಂದ್ರಾ, ಬಜಾಜ್ ಆಟೋ ಷೇರುಗಳಲ್ಲಿ ಏರಿಕೆ ಕಂಡುಬಂತು. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ದೊಡ್ಡ ಪ್ರಮಾಣದಲ್ಲಿ ಷೇರುಗಳನ್ನು ಖರೀದಿ ಮಾಡುತ್ತಿರುವುದು ಗಮನಾರ್ಹ.

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:5 × 1 =
Remember me
