ಮುಂಬೈ:20 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನವನ್ನು ಗುದನಾಳದಲ್ಲಿ ಇಟ್ಟು ಸಾಗಿಸುತ್ತಿದ್ದ ಮಹಿಳೆಯನ್ನು ಪುಣೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಈ ಬಗ್ಗೆ ಏರ್​ಪೋರ್ಟ್​ನ ಕಸ್ಟಮ್​ ಆಫೀಸ್​ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಮುಂಬೈನ ಮರಿಯಮ್ ಮೊಹಮ್ಮದ್ ಸಲೀಮ್ ಶೇಖ್ ಎಂಬ ಮಹಿಳೆ ದುಬೈನಿಂದ ವಿಶೇಷ ವಿಮಾನದಲ್ಲಿ ಬಂದು ಪುಣೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಇಳಿದಿದ್ದರು. ಅವರ ಬಳಿ ನಿಷಿದ್ಧ ಸರಕುಗಳು ಇರುವ ಬಗ್ಗೆ ಅದಾಗಲೇ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು.
ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ವಿಚಾರಣೆ ನಡೆಸಿದಾಗ ಗುದನಾಳದಲ್ಲಿ ಚಿನ್ನ ಇದ್ದುದು ಗೊತ್ತಾಗಿದೆ. ಈ ಚಿನ್ನ ಮಾತ್ರೆಗಳ ರೂಪದಲ್ಲಿ ಇದ್ದು, ಅದನ್ನು ಕಪ್ಪು ಟೇಪ್​ನಿಂದ ಮುಚ್ಚಲಾಗಿತ್ತು. ಒಟ್ಟು ಮೂರು ಮಾತ್ರೆಯಾಕಾರದ ಚಿನ್ನದ ತುಂಡುಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
