ತಿರುವನಂತಪುರ:ತಿರುವನಂತಪುರದ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಿಕ್ಕಿದ್ದ 30 ಕೆ.ಜಿ. ತುಂಬಿಟ್ಟ ಚಿನ್ನದ ಬ್ಯಾಗ್‌ ಕ್ಷಣ ಕ್ಷಣಕ್ಕೂ ಕುತೂಹಲದ ತಿರುವು ಪಡೆದುಕೊಳ್ಳುತ್ತಿದೆ.
ರಾಜತಾಂತ್ರಿಕ ರಕ್ಷಣೆ ಹೊಂದಿರುವ ‘ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌’ನಲ್ಲಿ ಈ ಚಿನ್ನ ಸಿಕ್ಕಿತ್ತು. ಇದನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಸಿಬ್ಬಂದಿ ವಶಪಡಿಸಿಕೊಂಡಿದ್ದರು. ಇಷ್ಟೊಂದು ಭಾರಿ ಪ್ರಮಾಣದ ಚಿನ್ನ ಇಲ್ಲಿಗೆ ಹೇಗೆ ಬಂತು? ಅದೂ ರಾಜತಾಂತ್ರಿಕ ರಕ್ಷಣೆ ಹೊಂದಿರುವ ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌ನಲ್ಲಿ ಇದು ಹೇಗೆ ಬಂತು ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದ ಸಂದರ್ಭದಲ್ಲಿ ಇದರ ಹಿಂದಿರುವುದು ಮೊದಲು ಕೇಳಿಬಂದ ಹೆಸರು ಸ್ವಪ್ನಾ ಸುರೇಶ್‌.
ತಿರುವನಂತಪುರದ ಯುನೈಟೆಡ್ ಅರಬ್ ಎಮಿರೇಟ್ಸ್ ಕಾನ್ಸುಲೇಟ್‌ನಲ್ಲಿ ಕಾರ್ಯನಿರ್ವಾಹಕ ಕಾರ್ಯದರ್ಶಿಯಾಗಿದ್ದ ಸ್ವಪ್ನಾ ಅವರ ಸಹಾಯಕ್ಕೆ ನಿಂತಿರುವವರ ತನಿಖೆ ಮಾಡುತ್ತಿರುವ ‍ಪೊಲೀಸರಿಗೆ ಇದೀಗ ಮೊದಲು ಕಂಡುಬಂದದ್ದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿಯಾಗಿರುವ ಐಎಎಸ್‌ ಅಧಿಕಾರಿ ಎಂ.ಶಿವಶಂಕರ್.
M Sivasankar, IAS removed as Pricipal Secretary to Chief Minister of Kerala. This is in light of allegations that M Sivasankar has links with Swapna Suresh who was allegedly part of Gold Smuggling racket using diplomatic channel.@DDNewslivepic.twitter.com/KGmGj3Wm9g
— DD News Malayalam (@DDNewsMalayalam)July 7, 2020

ಈ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾ ಮಾಡಲಾಗಿದೆ. ಸ್ವಪ್ನಾ ಸುರೇಶ್‌ ಅವರ ಜತೆಗೆ ಇವರ ನೇರ ಸಂಪರ್ಕವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ತೆಗೆದುಹಾಕಲಾಗಿದೆ.
ಈ ಕುರಿತು ಡಿಡಿ ನ್ಯೂಸ್ ಮಲಯಾಳಂ ಟ್ವೀಟ್ ಮಾಡಿದೆ. ಐಎಎಸ್‌ ಅಧಿಕಾರಿ ಎಂ.ಶಿವಶಂಕರ್ ಅವರನ್ನು ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತೆಗೆದುಹಾಕಲಾಗಿದೆ. ರಾಜತಾಂತ್ರಿಕ ಚಾನೆಲ್ ಬಳಸಿ ಚಿನ್ನದ ಕಳ್ಳಸಾಗಣೆ ದಂಧೆಯ ಭಾಗವಾಗಿದ್ದ ಸ್ವಪ್ನಾ ಸುರೇಶ್ ಅವರೊಂದಿಗೆ ಎಂ ಶಿವಶಂಕರ್ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಟ್ವಿಟರ್‌ನಲ್ಲಿ ತಿಳಿಸಲಾಗಿದೆ.
ಏನಿದು ಕೇಸ್‌: ಈ ಲಿಂಕ್‌ ನೋಡಿ-ಈ ‘ಚಿನ್ನದ ರಾಣಿ’ಯ ಇತಿಹಾಸವೇ ರೋಚಕ; ಇವಳಿಂದ ಕೇರಳ ಸಿಎಂ ಕುರ್ಚಿ ಗಡಗಡ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − 5 =
Remember me
