ಒಡಿಶಾ:ಒಡಿಶಾದ ಬಾಲಸೋರ್​​​ನಲ್ಲಿ ನಡೆದ ರೈಲು ದುರಂತದ ಬೆನ್ನಲ್ಲೇ ಇದೀಗ ಮತ್ತೊಂದು ರೈಲು ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಒಡಿಶಾದ ಬರ್ಗಢ ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಸಿಮೆಂಟ್ ಕಾರ್ಖಾನೆಯೊಂದರ ಗೂಡ್ಸ್ ರೈಲು ಸುಣ್ಣದ ಕಲ್ಲು ಸಾಗಿಸುತ್ತಿದ್ದ ರೈಲಿನ ಕನಿಷ್ಠ ಐದು ಬೋಗಿಗಳು ಹಳಿತಪ್ಪಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದ ಮೂರು ದಿನಗಳ ನಂತರ ಈ ರೈಲು  ಬರುತ್ತಿತ್ತು ಎನ್ನಲಾಗಿದೆ.
#WATCH| Some wagons of a goods train operated by a private cement factory derailed inside the factory premises near Mendhapali of Bargarh district in Odisha. There is no role of Railways in this matter: East Coast Railwaypic.twitter.com/x6pJ3H9DRC
— ANI (@ANI)June 5, 2023
ಕಳೆದ ಎರಡು ದಿನಗಳ ಹಿಂದೆ ಒಡಿಶಾದಲ್ಲಿ ತ್ರಿವಳಿ ರೈಲುಗಳ ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟು, ಕೆಲವರು ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಗೂಡ್ಸ್​ ರೈಲೊಂದು ಹಳಿ ತಪ್ಪಿರುವ ಘಟನೆ ಬರ್ಘಾ ಜಿಲ್ಲೆಯಲ್ಲಿ ನಡೆದಿದೆ.
ಕೋರಮಂಡಲ್ ಎಕ್ಸ್ ಪ್ರೆಸ್ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಅದರ ಹಲವು ಬೋಗಿಗಳು ಚದುರಿ ಹೋಗಿದ್ದವು. ಇದೇ ವೇಳೆ ಪಕ್ಕದ ಹಳಿಯಲ್ಲಿ ಹಾದು ಹೋಗುತ್ತಿದ್ದ ಬೆಂಗಳೂರು-ಹೌರಾ ಸೂಪರ್‍ಫಾಸ್ಟ್ ರೈಲಿಗೂ ಬೋಗಿಗಳು ಡಿಕ್ಕಿ ಹೊಡೆದು, ಅದರ ಕೆಲವು ಬೋಗಿಗಳೂ ಹಳಿ ತಪ್ಪಿದ್ದವು. ಸುಮಾರು 260 ಗಾಯಾಳುಗಳು ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಸುಮಾರು 900 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್- ಅವಿವಾ: ಫೋಟೋಗಳು ಇಲ್ಲಿವೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − seventeen =
Remember me
