ಪಶ್ಚಿಮ ಬಂಗಾಳ:ಬಾಲಸೋರ್​ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ನೂರಾರು ಮಂದಿ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಮತ್ತೊಂದು ರೈಲು ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಓಂಡಾ ರೈಲು ನಿಲ್ದಾಣದ ಬಳಿ ಎರಡು ಗೂಡ್ಸ್​ ರೈಲುಗಳ ನಡುವೆ ಅಪಘಾತವಾಗಿದೆ. ಘಟನೆಯಲ್ಲಿ ಗೂಡ್ಸ್​ ರೈಲಿನ ಲೋಕೊ ಪೈಲಟ್ ಗಾಯಗೊಂಡಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಒಂದು ಗೂಡ್ಸ್ ರೈಲು, ಇನ್ನೊಂದಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸುಮಾರು ಸುಮಾರು 12 ಬೋಗಿಗಳು ಹಳಿ ತಪ್ಪಿವೆ. ಅವಘಡದ ಬಳಿಕ ಖರಗ್​ಪುರ-ಬಂಕುರಾ-ಆದ್ರಾ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:8 ವರ್ಷದ ಬಾಲಕನ ಆಧಾರ್ ಕಾರ್ಡ್​ನಲ್ಲಿ ದಾಖಲೆ ಎಲ್ಲವೂ ಸರಿಯಾಗಿದೆ; ಆದರೆ….
#WATCH| West Bengal: Two goods trains collided at Onda railway station in Bankura. Rail operation on Kharagpur–Bankura–Adra line has been halted. More details awaited.pic.twitter.com/T4sL5rn7Rp— ANI (@ANI)June 25, 2023
#WATCH| West Bengal: Two goods trains collided at Onda railway station in Bankura. Rail operation on Kharagpur–Bankura–Adra line has been halted. More details awaited.pic.twitter.com/T4sL5rn7Rp
‘ಪ್ರಾಥಮಿಕ ಮಾಹಿತಿಯ ಪ್ರಕಾರ, ಒಂದು ಗೂಡ್ಸ್ ರೈಲು, ಮತ್ತೊಂದು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಮುಂದಿನ ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು’ ಎಂದು ಓಂಡಾ ನಿಲ್ದಾಣದ ಸುರಕ್ಷತಾ ಅಧಿಕಾರಿ ದಿಬಾಕರ್ ಮಜ್ಹಿ ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
