ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್​ ಇಲ್ಯೂಶನ್​) ಎಂದು ಕರೆಯುತ್ತೇವೆ.
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ಜಲಪಾತ ನೋಡಬಹುದು. ಅದರ ಸುತ್ತಲು ಹಸಿರು ಪ್ರದೇಶವಿದೆ. ಫೋಟೋದ ಒಂದು ಭಾಗದಲ್ಲಿ ಗೊರಿಲ್ಲಾ ನಿಂತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಗೊರಿಲ್ಲಾ ನೋಡಲು ಬಂಡೆಯಂತೆ ಕಾಣುತ್ತದೆ. ಸೂಕ್ಷ್ಮವಾಗಿ ನೋಡಿದರೆ ಗೊರಿಲ್ಲಾ ಇರುವುದು ಗೊತ್ತಾಗುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಗೊರಿಲ್ಲಾವನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
10 ಸೆಕೆಂಡ್​ ಸಮಯದಲ್ಲಿ ನೀವು ಗೊರಿಲ್ಲಾವನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಗೊರಿಲ್ಲಾವನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)

ಎಲ್ರ ಜಾತಕ ನನ್ನ ಕೈಯಲ್ಲಿದೆ.. ಹುಷಾರ್! ಏನ್​ ಮಾಡ್ಬೇಕು ಅಂತ ನನ್ಗೆ ಗೊತ್ತು… ಪೊಲೀಸರಿಗೆ ಸ್ಯಾಂಟ್ರೋ ರವಿ ಅವಾಜ್​

ಸರಸಕ್ಕೆ ಅಡ್ಡಿಪಡಿಸಿದ ಏನೂ ಅರಿಯದ ಕಂದಮ್ಮನ ಬಾಳಿಗೆ ಕೊಳ್ಳಿಯಿಟ್ಟ ಮಲತಂದೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten + 12 =
Remember me
