ನವದೆಹಲಿ:ಸತತ ಮೂರನೇ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಯ ಸಿಎಂ ಗಾದಿಯನ್ನೇರಲು ಅರವಿಂದ್​ ಕೇಜ್ರಿವಾಲ್ ಸಿದ್ಧರಾಗಿದ್ದಾರೆ.​ ಆಮ್​ ಆದ್ಮಿ ಪಕ್ಷವು ಗೆಲುವಿನ ಸಮೀಪದಲ್ಲಿರುವ ಬೆನ್ನಲ್ಲೇ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಕೇಜ್ರಿವಾಲ್​ ಪತ್ನಿ ಸುನೀತಾ ಅವರು ಇದಕ್ಕಿಂತ ಬಹುದೊಡ್ಡ ಉಡುಗೊರೆ ಇನ್ನೊಂದಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಈವರೆಗೂ ಸ್ವೀಕರಿಸಿದ್ದರಲ್ಲಿ ಇದೇ ಬಹುದೊಡ್ಡ ಉಡುಗೊರೆ. ಇದು ಸತ್ಯದ ಜಯವಾಗಿದೆ. ಸಮಸ್ಯೆಗಳ ಆಧಾರದ ಮೇಲೆ ರಾಜಕೀಯ ಮಾಡಬೇಕು. ಅವಹೇಳನಕಾರಿಯಂತಹ ಕಮೆಂಟ್​ಗಳನ್ನು ಮಾಡಬಾರದು ಎಂಬುದನ್ನು ರಾಜಕೀಯ ಪಕ್ಷಗಳು ದೆಹಲಿ ಚುನಾವಣಾ ಫಲಿತಾಂಶ ನೋಡಿ ಕಲಿಯಬೇಕು ಎಂದರು.
ಇದೇ ವೇಳೆ ಮಾತನಾಡಿದ ಕೇಜ್ರಿವಾಲ್​, ಇಂದು ನನ್ನ ಪತ್ನಿಯ ಹುಟ್ಟುಹಬ್ಬ. ನಾನು ಕೇಕ್​ ತಂದಿದ್ದೇನೆ. ನಿಮ್ಮೊಂದಿಗೆ ಎಲ್ಲವನ್ನು ಹಂಚಿಕೊಳ್ಳಲಿದ್ದೇನೆ ಎಂದು ಗೆಲುವಿನ ಖಷಿಯಲ್ಲಿ ಹೇಳಿದರು.
ಇನ್ನು ಚುನಾವಣಾ ಫಲಿತಾಂಶಕ್ಕೆ ಬರುವುದಾರೆ, ಒಟ್ಟು 70 ಸ್ಥಾನಗಳಲ್ಲಿ ಈಗಾಗಲೇ 38 ಸ್ಥಾನಗಳಲ್ಲಿ ಗೆಲವು ಸಾಧಿಸಿರುವ ಆಪ್​ ಉಳಿದ 24 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ ಮೂರು ಸ್ಥಾನಗಳಲ್ಲಿ ವಿಜಯೋತ್ಸವ ಆಚರಿಸಿದ್ದು, 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಕಾಂಗ್ರೆಸ್​ ಖಾತೆ ತೆರೆಯುವಲ್ಲಿ ವಿಫಲವಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight + two =
Remember me
