ದೆಹಲಿ:ದೆಹಲಿ – ಹೈದರಾಬಾದ್ ನಡುವೆ ಸಂಚರಿಸುವ ವಿಮಾನ ಶನಿವಾರ ವಿಶೇಷ ಘಟನೆಗೆ ಸಾಕ್ಷಿಯಾಯಿತು. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲಿದ ಸಹ ಪ್ರಯಾಣಿಕನಿಗೆ ತಕ್ಷಣವೇ ತುರ್ತು ಚಿಕಿತ್ಸೆ ನೀಡಿದ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಆತನ ಪ್ರಾಣ ಉಳಿಸಿದ್ದಾರೆ.
ರಾಜ್ಯಪಾಲೆ ವಾರಣಾಸಿಯಿಂದ ದೆಹಲಿ ಮಾರ್ಗವಾಗಿ ಹೈದರಾಬಾದ್‌ಗೆ ಆಗಮಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿಮಾನ ಪ್ರಯಾಣದಲ್ಲಿ ಸಹ ಪ್ರಯಾಣಿಕನ ಆರೋಗ್ಯ ಏರುಪೇರಾಗಿದೆ. ತಕ್ಷಣವೇ ಕ್ಯಾಬಿನ್ ಕ್ರ್ಯೂ ಪೈಲಟ್‌ಗೆ ಮಾಹಿತಿ ನೀಡಿದ್ದಾರೆ.
ಅವರು ವಿಮಾನದಲ್ಲಿ ಪ್ರಯಾಣಿಕರೊಬ್ಬರ ಆರೋಗ್ಯದಲ್ಲಿ ತೀವ್ರ ಸಮಸ್ಯೆಯಾಗಿದೆ, ವೈದ್ಯರ ನೆರವಿನ ಅಗತ್ಯವಿದೆ ಎಂದು ಘೋಷಣೆ ಮಾಡಿದ್ದಾರೆ. ಈ ವೇಳೆ ತಕ್ಷಣ ಕಾರ್ಯಪ್ರವೃತ್ತರಾದ ರಾಜ್ಯಪಾಲೆ ಸೌಂದರರಾಜನ್ ತುರ್ತು ಚಿಕಿತ್ಸೆ ನೀಡಿದ್ದಾರೆ.

ವಿಮಾನದಲ್ಲಿದ್ದ ವೈದ್ಯಕೀಯ ಸಲಕರಣೆಗಳಿಂದ ರಾಜ್ಯಪಾಲರು ಪ್ರಯಾಣಿಕನ ಪಲ್ಸ್, ಬಿಪಿ ಪರೀಕ್ಷಿಸಿದ್ದಾರೆ. ಸೂಕ್ತ ಔಷಧ ನೀಡಿದ ಕೆಲ ಹೊತ್ತಲ್ಲೇ ಪ್ರಯಾಣಿಕ ಚೇತರಿಸಿಕೊಂಡಿದ್ದಾರೆ. ರಾಜ್ಯಪಾಲೆ ಸೌಂದರರಾಜನ್ ರಾಜಕೀಯ ಪ್ರವೇಶಕ್ಕೂ ಮೊದಲು ವೈದ್ಯರಾಗಿದ್ದರು.
ಆ್ಯಂಬುಲೆನ್ಸ್ ಅಪಘಾತ ಪ್ರಕರಣ; ಗ್ರಾಮಸ್ಥರಿಂದ ಸಾಮೂಹಿಕವಾಗಿ ನಾಲ್ವರ ಅಂತಿಮಸಂಸ್ಕಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 2 =
Remember me
