ದೆಹಲಿ:ಕೇಂದ್ರ ಸರ್ಕಾರವು ಶುಭ ಸುದ್ದಿಯೊಂದನ್ನು ನೀಡಿದ್ದು, ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌ಒ) ಯೋಜನೆಯಡಿ ಠೇವಣಿಗಳ ಮೇಲೆ ಶೇ.8.15 ಬಡ್ಡಿ ದರವನ್ನು ನೀಡಲು ಅನುಮೋದಿಸಿದೆ.
ಇದನ್ನೂ ಓದಿ:ಹೈಕೋರ್ಟ್ ನ್ಯಾಯಮೂರ್ತಿಗಳ ಕೊಲೆ ಬೆದರಿಕೆ: ಪಾಕಿಸ್ತಾನದ ಮೂಲದ ಅಕೌಂಟ್ ನಂಬರ್ ನೀಡಿ ಹಣಕ್ಕೆ ಬೇಡಿಕೆ
2022-23ರ ಹಣಕಾಸು ವರ್ಷಕ್ಕೆ ತನ್ನ 6 ಕೋಟಿ ಚಂದಾದಾರರಿಗೆ ಇದರ ಲಾಭವಾಗಲಿದ್ದು, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ಇಪಿಎಫ್‌ಒನ ಕೇಂದ್ರೀಯ ಟ್ರಸ್ಟಿಗಳ ಮಂಡಳಿಯು ಮಾರ್ಚ್ 28ರಂದು FY23ಕ್ಕೆ 8.15% ಬಡ್ಡಿದರವನ್ನು ಶಿಫಾರಸು ಮಾಡಿತ್ತು. ಈ ಬಡ್ಡಿ ದರಕ್ಕೆ ಹಣಕಾಸು ಸಚಿವಾಲಯ ಒಪ್ಪಿಗೆ ನೀಡಿದ ನಂತರ ಈ ಆದೇಶ ಬಂದಿದೆ.
ಇಂದು ಹೊರಡಿಸಿದ ಸುತ್ತೋಲೆಯಲ್ಲಿ, ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು, 1952 ರ ಉದ್ಯೋಗಿಗಳ ಭವಿಷ್ಯ ನಿಧಿ ಯೋಜನೆಯ ಪ್ಯಾರಾ 60 (1) ರ ಅಡಿಯಲ್ಲಿ 2022-23ರ ಇಪಿಎಫ್ ಯೋಜನೆಯ ಪ್ರತಿಯೊಬ್ಬ ಸದಸ್ಯರ ಖಾತೆಗೆ ಶೇ 8.15 ಬಡ್ಡಿಯನ್ನು ಜಮಾ ಮಾಡಲು ಕೇಂದ್ರ ಸರ್ಕಾರದ ಅನುಮೋದನೆಯನ್ನು ರವಾನಿಸಿದೆ ಎಂದು ನೌಕರರ ಸಂಘಟನೆಯ(ಇಪಿಎಫ್‌ಒ) ಹೇಳಿದೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − four =
Remember me
