ನವದೆಹಲಿ:ನಿನ್ನೆಯಷ್ಟೇ ಕೇಂದ್ರ ಸರ್ಕಾರ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಕಡಿತಗೊಳಿಸಿ ಆದೇಶ ಹೊರಡಿಸಿತ್ತು. ಇಂದು ಈ ಆದೇಶವನ್ನು ಹಿಂತೆಗೆದುಕೊಂಡಿದ್ದುಮ, ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಮುಂಚಿನಂತೆ ಮುಂದುವರೆಯುತ್ತದೆ ಎಂದು ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2020-21 ರಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಮುಂದುವರೆಯುತ್ತದೆ. ಹಿಂದಿನ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಟ್ವಿಟ್ ಮಾಡಿದ್ದಾರೆ.
ಸಣ್ಣ ಉಳಿತಾಯ ಯೋಜನೆಗಳಾದ ಪಿಪಿಎಫ್, ಸುಕನ್ಯಾ ಸಮೃದ್ಧಿ ಯೋಜನೆ, ಎನ್​ಎಸ್​ಸಿ ಸೇರಿದಂತೆ ಎಲ್ಲ ಸಣ್ಣ ಉಳಿತಾಯ ಖಾತೆ ಮೇಲಿನ ಬಡ್ಡಿ ದರವನ್ನು ಶೇ 1.1 ರವರೆಗೆ ಇಳಿಕೆ ಮಾಡಲಾಗಿತ್ತು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.
ಪ್ರತಿ ಮೂರು ತಿಂಗಳಿಗೊಮ್ಮೆ ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿ ಪರಿಷ್ಕರಣೆ ಆಗುತ್ತದೆ.
ಪ್ಯಾನ್​ ಕಾರ್ಡ್​​ಗೆ ಆಧಾರ್ ಲಿಂಕ್: ಸಿಹಿ ಸುದ್ದಿ ನೀಡಿದ ತೆರಿಗೆ ಇಲಾಖೆ

ರಜನಿಕಾಂತ್​ಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − fifteen =
Remember me
