ಜೈಪುರ:ಸರ್ಕಾರಿ ಶಿಕ್ಷಕರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಸೀಟು ಮೀಸಲಿಡಲಾಗುವುದು ಎಂದು ರಾಜಸ್ಥಾನ ಸರ್ಕಾರ ಹೊಸ ಪ್ರಕಟಣೆ ಹೊರಡಿಸಿದೆ. ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಈ ಕುರಿತು ರಾಜಸ್ಥಾನ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿಯನ್ನು ಅನುಮೋದಿಸಿದ್ದಾರೆ. ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಈ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಎಚ್‌ಡಿಎಫ್‌ಸಿ ಬ್ಯಾಂಕ್‌ನ ಷೇರುಗಳ ಬೆಲೆ ರೂ. 2000ವರೆಗೆ ಹೆಚ್ಚಳ: ಹೀಗೇಕೆ ಹೇಳುತ್ತಿದ್ದಾರೆ ತಜ್ಞರು
ಈ ಮೂಲಕ ನಮ್ಮ ಪ್ರಣಾಳಿಕೆಯಲ್ಲಿ ನೀಡಿದ್ದ ಮತ್ತೊಂದು ಭರವಸೆಯನ್ನು ನಾವು ಈಡೇರಿಸಿದ್ದೇವೆ. ಈ ನಿರ್ಧಾರವು ‘ಸದೃಢ ಮಹಿಳೆ, ಅಭಿವೃದ್ಧಿ ಹೊಂದಿದ ರಾಜಸ್ಥಾನ’ ಪರಿಕಲ್ಪನೆಯನ್ನು ಅರಿತುಕೊಳ್ಳಲು ಮತ್ತು ರಾಜ್ಯದ ಮಹಿಳಾ ಶಕ್ತಿಗೆ ಹೊಸ ಸಾಧ್ಯತೆಗಳು ಮತ್ತು ಉದ್ಯೋಗವನ್ನು ಸೃಷ್ಟಿಸಲು ಸಹಾಯಕವಾಗಲಿದೆ ಎಂದು ಸಿಎಂ ತಾವು ಹಂಚಿಕೊಂಡ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.
ಮಹಿಳೆಯರು ಶೇ.30ರಷ್ಟು ಮೀಸಲಾತಿ ಪಡೆಯುತ್ತಿದ್ದ ಗ್ರೇಡ್ ಥರ್ಡ್ ಶಿಕ್ಷಕರ ವರ್ಗದಲ್ಲಿ ಶೇ.20ರಷ್ಟು ಕೋಟಾವನ್ನು ಹೆಚ್ಚಿಸಲಾಗಿದೆ. ಗ್ರೇಡ್ ಮೂರರಲ್ಲಿ ಸುಮಾರು 1.50 ಲಕ್ಷ ಪೋಸ್ಟ್‌ಗಳಿವೆ ಮತ್ತು ಇದು ರಾಜಸ್ಥಾನದಲ್ಲಿ ಸರ್ಕಾರಿ ಉದ್ಯೋಗಿಗಳ ದೊಡ್ಡ ವರ್ಗವಾಗಿದೆ. ರಾಜ್ಯದಲ್ಲಿ ಸುಮಾರು 27 ಸಾವಿರ ಗ್ರೇಡ್ ಥರ್ಡ್ ಶಿಕ್ಷಕರ ಹುದ್ದೆಗಳು ಇನ್ನೂ ಖಾಲಿ ಉಳಿದಿದ್ದು, ಮುಂದಿನ ದಿನಗಳಲ್ಲಿ ಭರ್ತಿಯಾಗುವ ನಿರೀಕ್ಷೆಯಿದೆ ಎಂದಿದ್ದಾರೆ,(ಏಜೆನ್ಸೀಸ್).
ಅಜಯ್ ಜಡೇಜಾ ಹೃದಯ ವೈಶಾಲ್ಯತೆ ನೆನೆದ ನಸೀಬ್ ಖಾನ್; ಮಾಜಿ ಕ್ರಿಕೆಟಿಗನಿಗೆ ಆಫ್ಘಾನಿಸ್ತಾನ ತಂಡ ಆಭಾರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − eleven =
Remember me
