ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿ ಬುಧವಾರ ರಚನೆಯಾಗಿರುವ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ಗೆ ಸರ್ಕಾರ ಒಂದು ರೂಪಾಯಿ ದೇಣಿಗೆ ನೀಡಿದೆ. ಇದರೊಂದಿಗೆ ಟ್ರಸ್ಟ್​ನ ಕೆಲಸ ಅಧಿಕೃತವಾಗಿ ಶುರುವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಪರವಾಗಿ ಕೇಂದ್ರ ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ಡಿ.ಮುರ್ಮು ಅವರು ಒಂದು ರೂಪಾಯಿಯನ್ನು ಟ್ರಸ್ಟ್​ ಖಾತೆಗೆ ಬುಧವಾರ ವರ್ಗಾವಣೆ ಮಾಡಿದ್ದಾರೆ.
ಈ ಟ್ರಸ್ಟ್ ಬೇಷರತ್ತಾಗಿ ದೇಣಿಗೆ, ಅನುದಾನ, ಚಂದಾ, ನಗ, ನಗದು ಅಥವಾ ಇನ್ನಾವುದೇ ರೂಪದ ನೆರವನ್ನೂ ಯಾರಿಂದ ಬೇಕಾದರೂ ಸ್ವೀಕರಿಸಬಹುದಾಗಿದೆ. ಸದ್ಯ ಈ ಟ್ರಸ್ಟ್​ ಹಿರಿಯ ನ್ಯಾಯವಾದಿ ಕೆ.ಪರಾಸರನ್ ಅವರ ಮನೆಯಿಂದಲೇ ಕಾರ್ಯಾಚರಿಸಲಿದೆ. ಭವಿಷ್ಯದಲ್ಲಿ ಇದು ಸ್ವಂತ ಕಚೇರಿಗೆ ಸ್ಥಳಾಂತರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟ್ರಸ್ಟ್​​ನಲ್ಲಿ ಹಿರಿಯ ನ್ಯಾಯವಾದಿ ಕೆ.ಪರಾಸರನ್​, ಅಲಹಾಬಾದ್​​ನ ಜಗದ್ಗುರು ಶಂಕರಾಚಾರ್ಯ ಜ್ಯೋತಿಷ್​ಪೀಠಾಧೀಶ್ವರ ಸ್ವಾಮಿ ವಾಸುದೇವಾನಂದ ಸರಸ್ವತೀಜಿ, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಹರಿದ್ವಾರದ ಯುಗಪುರುಷ ಪರಮಾನಂದ ಜೀ ಮಹಾರಾಜ್​, ಪುಣೆಯ ಸ್ವಾಮಿ ಗೋವಿಂದದೇವ್ ಗಿರಿಜೀ ಮಹಾರಾಜ್​, ಅಯೋಧ್ಯೆಯ ವಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ, ಅಯೋಧ್ಯೆಯ ಹೋಮಿಯೋಪತಿ ಡಾಕ್ಟರ್​ ಅನಿಲ್ ಮಿಶ್ರಾ, ಪಟನಾದ ಕಾಮೇಶ್ವರ ಚೌಪಾಲ್​(ಎಸ್​ಸಿ) , ಮಹಾಂತ ದಿನೇಂದ್ರ ದಾಸ್​, ಅಯೋಧ್ಯೆಯ ನಿರ್ಮೋಹಿ ಅಖಾಡದ ಪ್ರತಿನಿಧಿಗಳು ಸದಸ್ಯರಾಗಿರುತ್ತಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
