ನವದೆಹಲಿ:ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಒಂದು ದೇಶ, ಒಂದು ಚುನಾವಣೆ’ ವಿಧೇಯಕ ಮಂಡನೆ ಆಗಲಿರುವ ಕುರಿತು ನಿನ್ನೆಯಷ್ಟೇ ವಿಚಾರ ಹೊರಬಿದ್ದಿದ್ದು, ಈ ಕುರಿತು ಕೇಂದ್ರ ಸರ್ಕಾರ ಇಂದು ಮಹತ್ವದ ಹೆಜ್ಜೆಯನ್ನು ಇರಿಸಿದೆ.
ಸೆ. 18ರಿಂದ 22ರ ವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಒಂದು ದೇಶ, ಒಂದು ಚುನಾವಣೆ ವಿಧೇಯಕ’ ಮಂಡನೆ ಮಾಡಲಿರುವುದಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ನಿನ್ನೆಯಷ್ಟೇ ಹೇಳಿದ್ದರು.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಆ ನಿಟ್ಟಿನಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಸಮಿತಿಯನ್ನೂ ರಚನೆ ಮಾಡಲಾಗಿತ್ತು. ಇಂದು ಆ ಸಮಿತಿಗೆ 7 ಮಂದಿ ಸದಸ್ಯರನ್ನು ಕೂಡ ನೇಮಿಸಲಾಗಿದೆ. ಈ ಮೂಲಕ ಒಂದು ದೇಶ, ಒಂದು ಚುನಾವಣೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಕೇಂದ್ರ ಗೃಹ ಸಚಿವ ಅಮಿತ್ ಷಾ, ಕಾಂಗ್ರೆಸ್ ಸಂಸದ ಅಧಿರ್ ರಂಜನ್ ಚೌಧರಿ, ಮಾಜಿ ಸಂಸದ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಮಾಜಿ ಚೇರ್ಮನ್ ಎನ್​.ಕೆ.ಸಿಂಗ್, ಲೋಕಸಭೆಯ ಮಾಜಿ ಸೆಕ್ರೆಟರಿ ಜನರಲ್ ಡಾ.ಸುಭಾಷ್ ಸಿ. ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ, ಮಾಜಿ ಚೀಫ್​ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಅಂದಹಾಗೆ, ಈ ವಿಧೇಯಕ ಜಾರಿಗೆ ಬಂದಲ್ಲಿ ದೇಶದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿವೆ.
ಅಬ್ಬಬ್ಬಾ.. ಇದೇನಿದು ‘ಸರ್ಪ’ರೈಸ್!: ದೇವರಕೋಣೆಯಲ್ಲಿ ಕಾಳಿಂಗ ಸರ್ಪ, ಸ್ಕೂಲ್​ಬ್ಯಾಗ್​ನಲ್ಲಿ ನಾಗರಹಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
