ದೆಹಲಿ:ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ಗಳ ಆಮದು ನಿರ್ಬಂಧ ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯವು (ಡಿಜಿಎಫ್​ಟಿ) ತಿಳಿಸಿದೆ.ಮಾನ್ಯವಾದ ಪರವಾನಗಿ ಇದ್ದರೆ ಮಾತ್ರ ಇವುಗಳ ಆಮದಿಗೆ ಅನುಮತಿಯನ್ನು ನೀಡಲಾಗಿದ್ದು, HSN 8741 ಅಡಿಯಲ್ಲಿ ಬರುವ ಸರ್ವರ್‌, ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ಆಲ್-ಇನ್-ಒನ್ ಪರ್ಸನಲ್ ಕಂಪ್ಯೂಟರ್‌ಗಳು ಮತ್ತು ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ಗಳು ಆಮದು ನಿರ್ಬಂಧಿತ ವಸ್ತುಗಳಾಗಿವೆ.ಇದನ್ನೂ ಓದಿ:ಮಗು ಹುಟ್ಟಿದ್ದಕ್ಕೆ ಸಿಹಿ ಹಂಚಿದ ರೈತ: ಮದ್ಯ ಕೊಡಿಸುವಂತೆ ಹಲ್ಲೆಗೈದು ಪ್ರಾಣ ತೆಗೆದ ನಾಲ್ವರುಬ್ಯಾಗೇಜ್ ನಿಯಮಗಳ ಅಡಿಯಲ್ಲಿ ಮಾಡಿಕೊಳ್ಳಲಾಗುವ ಆಮದುಗಳಿಗೆ ಈ ನಿರ್ಬಂಧವು ಅನ್ವಯಿಸುವುದಿಲ್ಲ ಎಂದು ಹೇಳಲಾಗಿದ್ದು, ಇ-ಕಾಮರ್ಸ್ ಪೋರ್ಟಲ್‌ಗಳಿಂದ ಪೋಸ್ಟ್ ಅಥವಾ ಕೊರಿಯರ್ ಮೂಲಕ ಖರೀದಿಸಿದ 1 ಲ್ಯಾಪ್‌ಟಾಪ್, ಟ್ಯಾಬ್ಲೆಟ್, ಆಲ್-ಇನ್-ಒನ್ ಪರ್ಸನಲ್ ಕಂಪ್ಯೂಟರ್ ಅಥವಾ ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ಗೆ ವಿನಾಯಿತಿಯನ್ನು ಒದಗಿಸಲಾಗಿದೆ ಎಂದು ತಿಳಿಸಲಾಗಿದೆ.ಸಂಶೋಧನೆ ಮತ್ತು ಅಭಿವೃದ್ಧಿ, ಪರೀಕ್ಷೆ, ಬೆಂಚ್‌ಮಾರ್ಕಿಂಗ್ ಮತ್ತು ಮೌಲ್ಯಮಾಪನ ದುರಸ್ತಿ ಮತ್ತು ಮರು-ರಫ್ತು ಮತ್ತು ಉತ್ಪನ್ನ ಅಭಿವೃದ್ಧಿ ಉದ್ದೇಶಗಳಂತಹ 20 ವಸ್ತುಗಳಿಗೂ ವಿನಾಯಿತಿಯನ್ನು ಒದಗಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ಪರ್ಸನಲ್ ಕಂಪ್ಯೂಟರ್‌ಗಳು ಮತ್ತು ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ಗಳು ಮತ್ತು ಸರ್ವರ್‌ಗಳನ್ನು ಆಮದಿಗೆ ವಿನಾಯಿತಿ ನೀಡಲಾಗುತ್ತದೆ ಎಂದು ಡಿಜಿಎಫ್​ಟಿ ಹೇಳಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 3 =
Remember me
