ನವದೆಹಲಿ: ಹೆಣ್ಮಕ್ಕಳ ಮದುವೆಯಾಗುವುದಕ್ಕೆ ಇರುವ ಕನಿಷ್ಠ ವಯಸ್ಸು ಎಷ್ಟಿರಬೇಕು ಎಂಬ ಬಗ್ಗೆ ಸರ್ಕಾರ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು. ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ಫುಡ್​ ಆ್ಯಂಡ್ ಅಗ್ರಿಕಲ್ಚರ್​ ಆರ್ಗನೈಸೇಷನ್​ (ಎಫ್​ಎಒ)ನ 75ನೇ ವಾರ್ಷಿಕೋತ್ಸವದಲ್ಲಿ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಿ ಮಾತನಾಡುವ ವೇಳೆ ಈ ವಿಚಾರ ತಿಳಿಸಿದರು.
ಮದುವೆಯಾಗುವುದಕ್ಕೆ ಹೆಣ್ಮಕ್ಕಳ ಕನಿಷ್ಠ ವಯಸ್ಸು ಎಷ್ಟಿರಬೇಕು ಎಂಬುದನ್ನು ಅಧ್ಯಯನ ಮಾಡಿ ಶಿಫಾರಸು ಮಾಡಲು ಸಮಿತಿಯೊಂಧನ್ನು ರಚಿಸಲಾಗಿದೆ. ಅದು ನೀಡುವ ಶಿಫಾರಸಿನ ಮೇರೆಗೆ ಸರ್ಕಾರ ನಿರ್ಣಯ ತೆಗೆದುಕೊಳ್ಳಲಿದೆ. ಇದೇ ರೀತಿ, ಕಳೆದ ಆರು ವರ್ಷಗಳ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೆಣ್ಮಕ್ಕಳ ನೋಂದಣಿ ಹುಡುಗರ ನೋಂದಣಿಗಿಂತ ಇದೇ ಮೊದಲ ಬಾರಿಗೆ ಹಚ್ಚಳವಾಗಿದೆ. ಇದಕ್ಕಾಗಿ ಸರ್ಕಾರ ಅನೇಕ ಪ್ರಯತ್ನಗಳನ್ನು ಮಾಡಿತ್ತು ಎಂಬುದನ್ನು ಪ್ರಧಾನಿ ಸ್ಮರಿಸಿಕೊಂಡರು.
ಇದನ್ನೂ ಓದಿ:ದಿಢೀರ್​ ಮನೆಗೆ ನುಗ್ಗಿ ವಿದ್ಯಾರ್ಥಿನಿಯ ಹತ್ಯೆ: ಆ ಒಂದು ಫೋಟೋದಿಂದ ಪ್ರಕರಣಕ್ಕೆ ಹೊಸ ತಿರುವು!
ಸ್ವಾತಂತ್ರ್ಯ ದಿನಾಚರಣೆ ದಿನದ ಭಾಷಣದಲ್ಲಿ ಹುಡುಗಿಯರ ಮದುವೆಯ ವಯಸ್ಸು ಏರಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದರು. ಪ್ರಸ್ತುತ ಮದುವೆ ಆಗೋದಕ್ಕೆ ಮಹಿಳೆಯರಿಗೆ ಕನಿಷ್ಠ ವಯಸ್ಸು 18 ಆದರೆ, ಪುರುಷರಿಗೆ ಕನಿಷ್ಠ 21 ವರ್ಷ ವಯಸ್ಸು ಆಗಿರಬೇಕು. (ಏಜೆನ್ಸೀಸ್)
ಎಫ್​ಎಒ 75ನೇ ವಾರ್ಷಿಕೋತ್ಸವ ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಿದ್ರು ಪ್ರಧಾನಿ ಮೋದಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × three =
Remember me
